ಅ.6: ಪಂಜದಲ್ಲಿ ಬೃಹತ್ ರಕ್ತದಾನ ಶಿಬಿರ

0

ಪಂಚಶ್ರೀ ಸ್ಪೋರ್ಟ್ಸ್ ಕ್ಲಬ್ ಪಂಜ ಇದರ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇದರ ಸಹಯೋಗದೊಂದಿಗೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರ ಅ.6 ರಂದು ಬೆಳಿಗ್ಗೆ ಗಂಟೆ 9 ರಿಂದ ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಲಿದೆ.

ಈ ಶಿಬಿರದಲ್ಲಿ ರಕ್ತದಾನಿಗಳು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು. 18 ರಿಂದ 65 ವರುಷದ ಆರೋಗ್ಯವಂತರಿಗೆ ರಕ್ತದಾನಕ್ಕೆ ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.