ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಹಿಮಲೇಶ್ವರಿಯವರಿಗೆ ಬೀಳ್ಕೊಡುಗೆ

0

ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ವಯೋನಿವೃತ್ತಿ ಹೊಂದಿದ ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಹಿಮಲೇಶ್ವರಿ ಅವರಿಗೆ ಬಿಳ್ಕೊಡುವ ಸಮಾರಂಭ ಸೆ. 30ರಂದು ನಡೆಯಿತು.


ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ ಹೆಚ್.ಆರ್., ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪ ಪ್ರಭು, ಡಿಟಿಓ ಡಾ. ಖತೀಜ ದಿಲ್ಸಾದ್, ತಾಲೂಕು ಆರೋಗ್ಯ ಅಧಿಕಾರಿ ಡಾ. ನಂದಕುಮಾರ್ ಬಿ., ಸುಬ್ರಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ತ್ರಿಮೂರ್ತಿ, ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ್, ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕುಲದೀಪ್, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕಿರಣ್, ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪಾದ್ಮಾ ಶುಹಾಲ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಎಲ್ಲಾ ಪದನಾಮ ಸಿಬ್ಬಂದಿ ವರ್ಗದವರು, ಸಂಚಾರಿ ಗಿರಿಜನ ಆರೋಗ್ಯ ಘಟಕ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಎಲ್ಲಾ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಶ್ರೀಮತಿ ಹಿಮಲೇಶ್ವರಿಯವರಿಗೆ ಶುಭ ಹಾರೈಸಿದರು.

ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಪರವಾಗಿ ನೆನಪಿನ ಕಾಣಿಕೆ ನೀಡಿ, ಸನ್ಮಾನಿಸಿ, ಪುರಸ್ಕರಿಸಿ ಶುಭ ಹಾರೈಸಿದರು.