ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

0

ದ. ಕ.ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ ,ಉಪ ನಿರ್ದೇಶಕರ ಕಚೇರಿ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ತಾಲೂಕು ಹಾಗೂ ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಇದರ ಜಂಟಿ ಆಶ್ರಯದಲ್ಲಿ 2024ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಚೊಕ್ಕಾಡಿ ಪ್ರೌಢಶಾಲಾ ಕ್ರೀಡಾಂಗಣ ಕುಕ್ಕುಜಡ್ಕದಲ್ಲಿ ಸೆ.28 ರಂದು ನಡೆಯಿತು.

ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಎಸ್.ಅಂಗಾರ ಸಭಾಧ್ಯಕ್ಷತೆ ವಹಿಸಿ ಪಂದ್ಯಾಟವನ್ನು ಉದ್ಘಾಟಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ .ಯು, ಸುಳ್ಯ ತಾಲೂಕು ದೈಹಿಕ ಶಿಕ್ಷಣಪರಿವೀಕ್ಷಣಾಧಿಕಾರಿ ಶ್ರೀಮತಿ ಆಶಾ ನಾಯಕ್,ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾಕುಮಾರಿ,ಶಾಲಾ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ,ದೇವಚಳ್ಳ ಕ್ಲಸ್ಟರ್ ನ ಸಿ ಆರ್ ಪಿ ಮಹೇಶ್ , ನಿವೃತ್ತ ದೈಹಿಕ ಶಿಕ್ಷಕ ಚಂದ್ರಶೇಖರ ಮೂಕಮಲೆ,ಗ್ರೇಡ್ 1 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸೂಫಿ ಪೆರಾಜೆ, ಸುಳ್ಯ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಮೇರ್ಕಜೆ, ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ತೇಜಸ್ವಿ ಕಡಪಳ, ಕೋಶಾಧಿಕಾರಿ ಹರ್ಷವರ್ಧನ ಬೊಳ್ಳೂರು, ನಿರ್ದೇಶಕರಾದ ಸತ್ಯಪ್ರಸಾದ ಪುಳಿಮಾರಡ್ಕ, ಚೊಕ್ಕಾಡಿ ಪ್ರೌಢಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಮೂಕಮಲೆ, ಚೊಕ್ಕಾಡಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ, ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರತಿಭಾ ಎಸ್ ಆಳ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಸಂಕೀರ್ಣ ಚೊಕ್ಕಾಡಿ, ದೈಹಿಕ ಶಿಕ್ಷಕ ಮಿಥುನ್ ರವರನ್ನು ಶಿಕ್ಷಣ ಇಲಾಖೆಯ ಪರವಾಗಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗೌರವಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಸ್ವಾಗತಿಸಿ, ತೇಜಸ್ವಿ ಕಡಪಳ ವಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ಸಂಧ್ಯಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.


ಸಮಾರೋಪ ಸಮಾರಂಭ:

ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಆಶಾ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಳ್ಯ ಜೂನಿಯರ್ ಕಾಲೇಜ್ ಉಪ ಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ,
ಶಿಕ್ಷಣ ಸಂಯೋಜಕಿ ಶ್ರೀಮತಿಸಂಧ್ಯಾಕುಮಾರಿ,ಸಿಆರ್ ಪಿ ಮಹೇಶ್ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಅಣ್ಣಾಜಿ ಗೌಡ ಪೈಲೂರು, ಕಾರ್ಯದರ್ಶಿ ತೇಜಸ್ವಿ ಕಡಪಳ, ಕೋಶಾಧಿಕಾರಿ ಹರ್ಷವರ್ಧನ ಬೊಳ್ಳೂರು, ನಿರ್ದೇಶಕರಾದ ವೆಂಕಟ್ರಮಣ ಇಟ್ಟಿಗುಂಡಿ, ಸತ್ಯಪ್ರಸಾದ್ ಪುಳಿಮಾರಡ್ಕ,ನಿವೃತ್ತ ದೈಹಿಕ ಶಿಕ್ಷಕ ಚಂದ್ರಶೇಖರ ಮೂಕಮಲೆ, ಮಂಗಳೂರು ಉತ್ತರ ವಲಯದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭರತ್,ಗ್ರೇಡ್ 1 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸೂಫಿ ಪೆರಾಜೆ, ಸುಳ್ಯ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಧನಂಜಯ ಮೇರ್ಕಜೆ, ಚೊಕ್ಕಾಡಿ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಸಂಕೀರ್ಣ ಚೊಕ್ಕಾಡಿ, ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪ್ರತಿಭಾ ಎಸ್ ಆಳ್ವ, ಶಾಲಾ ದೈಹಿಕ ಶಿಕ್ಷಕರಾದ ಮಿಥುನ್ ಉಪಸ್ಥಿತರಿದ್ದರು.


ಧನಂಜಯ ಮೇರ್ಕಜೆ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.

ಜಿಲ್ಲೆಯ 7 ಕ್ರೀಡಾ ವಿಭಾಗಗಳ ಪ್ರೌಢಶಾಲಾ ಬಾಲಕ ,ಬಾಲಕಿಯರ ಹಾಗೂ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ 28 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದರು.


ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಬೆಳ್ತಂಗಡಿ, ಬಾಲಕಿಯರ ವಿಭಾಗದಲ್ಲಿ ಮಂಗಳೂರು ಉತ್ತರ, ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲಿ ಮಂಗಳೂರು ಉತ್ತರ ವಿಭಾಗದ ತಂಡಗಳು ಚಾಂಪಿಯನ್ ಆಗಿ ವಿಭಾಗೀಯ ಮಟ್ಟಕ್ಕೆ ಆಯ್ಕೆಗೊಂಡರು.