ಇಂದು ಸಂಜೆ ಶ್ರೀ ಶಾರದಾಂಬ ದಸರಾ ಸಮೂಹ ಸಮಿತಿ ಸಭೆ

0

ಸುಳ್ಯದ ನಾಡಹಬ್ಬ ಸಾರ್ವಜನಿಕ ಶ್ರೀ ಶಾರದಾಂಬ ದಸರಾ ಸಮೂಹ ಸಮಿತಿಯ ಸಭೆಯು ಇಂದು ಸಂಜೆ 4ಗಂಟೆಗೆ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶ್ರೀ ಶಾರದಾಂಬ ಚಪ್ಪರದ ಅಡಿಯಲ್ಲಿ ನಡೆಯಲಿದೆ.


ಈ ಸಭೆಯಲ್ಲಿ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಪದಾಧಿಕಾರಿಗಳು, ಶ್ರೀ ಶಾರದಾಂಬ ಸೇವಾ ಸಮಿತಿಯ ಪದಾಧಿಕಾರಿಗಳು, ಗೌರವ ಸಲಹೆಗಾರರುಗಳು, ಗೌರವ ಸದಸ್ಯರುಗಳು, ಉತ್ಸವ ಸಮಿತಿಯ ಪದಾಧಿಕಾರಿಗಳು, ಸುಳ್ಯ ನಗರದ ಎಲ್ಲಾ ವಾರ್ಡ್ ಸಮಿತಿ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು, ಉಪ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿರಬೇಕಾಗಿ ಶ್ರೀ ಶಾರದಾಂಬ ಸಮೂಹ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಸಭೆಯಲ್ಲಿ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ಕುರಿತಂತೆ ಚರ್ಚೆ ನಡೆಯಲಿದೆ.