ಗೂನಡ್ಕ: ಚಾಲಕನ ನಿಯಂತ್ರಣ ತಪ್ಪಿ ಮಣ್ಣಿನ ದಿಬ್ಬಕ್ಕೆ ಕಾರು ಢಿಕ್ಕಿ: ಜಖಂ

0

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ದ.ಕ. ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಅ.7ರಂದು ಬೆಳಿಗ್ಗೆ ಸಂಭವಿಸಿದೆ.

ಕಾಸರಗೋಡಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ನಾಲ್ಕು ಮಂದಿ ಪ್ರಯಾಣಿಕರು ಅಪಯಾದಿಂದ ಪಾರಾಗಿದ್ದಾರೆ.