ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಳೆಗೇಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

0


ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಳೆಗೇಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.
ಹಳೆಗೇಟಿನ ತಮಿಳು ಕ್ವಾಟ್ರಸ್‌ನ ಯುವಕ ಪ್ರಶಾಂತ್ ಕಳೆದ ೧೦ ದಿನಗಳ ಹಿಂದೆ ಮನೆಯಲ್ಲಿ ಇಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
. ವಿಷಯ ತಿಳಿದ ಮನೆಯವರು ಕೂಡಲೇ ಅವರನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಕಳೆದ ೧೦ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿವಾಹವಾಗಿ ೬ ವರ್ಷಗಳಾಗಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಮೃತರು ಪತ್ನಿ ಶಾಲಿನಿ, ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.