ಶ್ರೀ ಶಾರದಾಂಬ ದಸರಾ ಮಹಿಳಾ ಸಮಿತಿ ಪದಾಧಿಕಾರಿಗಳ ಸಭೆ

0

ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ ಮಹಿಳಾ ಸಮಿತಿಯ ಪದಾಧಿಕಾರಿಗಳ ಸಭೆಯು ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ಅ.7ರಂದು ಸಂಜೆ ನಡೆಯಿತು.

ಸಭೆಯಲ್ಲಿ ಅ.9ರಿಂದ ಪ್ರಾರಂಭಗೊಳ್ಳಲಿರುವ ದಸರಾ ಉತ್ಸವದ ಪೂರ್ವ ತಯಾರಿ ಸೇರಿದಂತೆ ಇಡೀ ದಿನದ ಮಹಿಳಾ ದಸರಾ ಕಾರ್ಯಕ್ರಮದ ಕುರಿತಂತೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ,, ದಸರಾ ಉತ್ಸವ ಸಮಿತಿ ಅಧ್ಯಕ್ಷೆ ಭಾಗೀರಥಿ ಮುರುಳ್ಯ, ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶಶಿಕಲಾ ನೀರಬಿದಿರೆ, ಶ್ರೀಮತಿ ಯಶೋದ ರಾಮಚಂದ್ರ ಸೇರಿದಂತೆ ಮಹಿಳಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.