ಸುಳ್ಯ ದಸರಾ ಉತ್ಸವಕ್ಕೆ ಹಸಿರುವಾಣಿ ಸಮರ್ಪಣೆ

0

ಹಸಿರುವಾಣಿ ಮೆರವಣಿಗೆಗೆ ಮೆರಗು ತಂದ ಕುಣಿತ ಭಜನೆ

ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ ಕಾರ್ಯಕ್ರಮಕ್ಕೆ ಅ.9ರಂದು ಅಪರಾಹ್ನ ಅದ್ಧೂರಿಯಾಗಿ ಹಸಿರುವಾಣಿ ಸಮರ್ಪಣೆ ಮಾಡಲಾಯಿತು.

ಸುಳ್ಯ ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಿಂದ ಹೊರಟ ಹಸಿರುವಾಣಿ ಮೆರವಣಿಗೆಯು ತಾಲೂಕಿನ ಖ್ಯಾತ ಭಜಕರಿಂದ ಕುಣಿತ ಭಜನೆಯೊಂದಿಗೆ ಸಾಗಿ ಸಮರ್ಪಣೆಗೊಂಡಿತು.

ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಪದಾಧಿಕಾರಿಗಳು, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿಯ ಪದಾಧಿಕಾರಿಗಳು, ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು, ಶ್ರೀ ಶಾರದಾಂಬ ಉತ್ಸವ ಸಮಿತಿಯ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು, ನಗರದ ವಿವಿಧ ವಾರ್ಡ್ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.