ಕಲ್ಮಡ್ಕ ಗ್ರಾಮದ ಬೊಮ್ಮೆಟಿ ಕರುವಾಜೆ ದಿ.ವೆಂಕಟ್ರಮಣ ಜೋಯಿಸ ರವರ ಪತ್ನಿ ಶ್ರೀಮತಿ ಸಾವಿತ್ರಿ ರವರು ಅಲ್ಪ ಕಾಲದ ಅಸೌಖ್ಯದಿಂದ ಅ.9 ರಂದು ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 87 ವರುಷ ವಯಸ್ಸಾಗಿತ್ತು. ಮೃತರು ಪುತ್ರರಾದ ಗಣಪತಿ ಜೋಯಿಸ, ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಜೋಯಿಸ, ಕೃಷ್ಣ ಜೋಯಿಸ, ಪುತ್ರಿ ಶ್ರೀಮತಿ ನಳಿನಿ, ಸೊಸೆಯಂದಿರು, ಅಳಿಯಂದಿರು ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.