ಡೋಲು ಬಾರಿಸುವ ಮೂಲಕ ಚಾಲನೆ ನೀಡಿದ ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ
ಮಡಿಕೇರಿಯಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವದ ಅಂಗವಾಗಿ ಇಂದು ನಡೆದ ಜಾನಪದ ದಸರಾದ ಮೆರವಣಿಗೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿಯವರು ಡೋಲು ಬಾರಿಸುವ ಮೂಲಕ ಚಾಲನೆ ನೀಡಿದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ, ವೈಜ್ಞಾನಿಕ ಯುಗದಲ್ಲಿ ನಶಿಸಿ ಹೋಗುತ್ತಿರುವ ಜನಪದ ಕಲೆ ಸಂಸ್ಕೃತಿ ಆಚಾರ ವಿಚಾರಗಳನ್ನು ಯುವ ಜನತೆ ಇಂತಹ ವೇದಿಕೆಗಳನ್ನು ಬಳಸಿಕೊಳ್ಳುವುದರಿಂದ ಮುಂದಿನ ಪೀಳಿಗೆಗೆ ಉದ್ದೀಪನಗೊಳಿಸಬಹುದಾಗಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿಯವರು ಅಭಿಪ್ರಾಯಪಟ್ಟರು.
ಅರೆಭಾಷೆ ಅಕಾಡೆಮಿ ವತಿಯಿಂದ ಲೋಕೇಶ್ ಊರುಬೈಲ್ ನಿರ್ದೇಶನದ ಅರೆಭಾಷೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ದಸರದ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆಸಿಕೊಡಲಾಯಿತು.
ವೇದಿಕೆಯಲ್ಲಿ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು