ಪೆರಾಜೆ: ಸ್ಕೂಟಿ ಸ್ಕಿಡ್ ಅಗಿ ಪಲ್ಟಿ – ಯುವಕನಿಗೆ ಗಾಯ

0

ಕಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದು ಜಖಂ

ಸ್ಕೂಟಿ ಸ್ಕಿಡ್ ಆದ ಪರಿಣಾಮವಾಗಿ ಯುವಕನೋರ್ವ ಬಿದ್ದು ಗಾಯಗೊಂಡಿದ್ದು , ಯುವಕ ರಸ್ತೆಯಲ್ಲಿ ಬಿದ್ದಿರುವುದನ್ನು ನೋಡಲೆಂದು ಕಾರು ಚಾಲಕ ಬ್ರೇಕ್ ಹಾಕಿದ ವೇಳೆ ಹಿಂಬದಿಯಿಂದ ಕಾರಿಗೆ ಬೈಕ್ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಪೆರಾಜೆಯಲ್ಲಿ ಅ.12ರಂದು ಮಧ್ಯಾಹ್ನ ಸಂಭವಿಸಿದೆ.

ಅರಂತೋಡಿನ ಯುವಕನೋರ್ವ ಸುಳ್ಯದಿಂದ ಅರಂತೋಡಿಗೆ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಪೆರಾಜೆ ಪೆಟ್ರೋಲ್ ಪಂಪ್ ಬಳಿ ಸ್ಕೂಟಿ ಸ್ಕಿಡ್ ಆಗಿ ಪಲ್ಟಿಯಾಯಿತೆನ್ನಲಾಗಿದೆ. ಪರಿಣಾಮವಾಗಿ ಯುವಕ ರಸ್ತೆಗೆ ಎಸೆಯಲ್ಪಟ್ಟು ಕೈಗೆ ಗಾಯಗೊಂಡರು.

ಅವರನ್ನು ಅಂಬ್ಯುಲೆನ್ಸ್ ಮೂಲಕ ಸುಳ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಈ ಅಪಘಾತ ನಡೆದ ಸಂದರ್ಭದಲ್ಲಿ ಅರಂತೋಡಿನಿಂದ ಸುಳ್ಯಕ್ಕೆ ಬರುತ್ತಿದ್ದ ಅರಂತೋಡಿನ ಸತ್ಯ ಎಂಬವರು ತನ್ನ ಕಾರನ್ನು ಬ್ರೇಕ್ ಹಾಕಿ ನಿಲ್ಲಿಸಿದಾಗ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಕಾರಿನ ಹಿಂಬದಿಗೆ ಢಿಕ್ಕಿ
, ಬೈಕ್ ಹಾಗೂ ಕಾರು ಜಖಂಗೊಂಡಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿರುವುದಾಗಿ ತಿಳಿದುಬಂದಿದೆ.