ಅರಂತೋಡು: ಕಾರು – ಸ್ಕೂಟಿ ಢಿಕ್ಕಿ – ಸ್ಕೂಟಿ ಸವಾರನಿಗೆ ಗಾಯ

0

ಕಾರು ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟಿ ಸವಾರ ಗಾಯಗೊಂಡ ಘಟನೆ ಅರಂತೋಡಿನಲ್ಲಿ ಅ‌.13ರಂದು ಬೆಳಿಗ್ಗೆ ಸಂಭವಿಸಿದೆ.
ಅರಂತೋಡಿನ ಕಾಮದೇನು ಹೋಟೆಲ್ ಬಳಿ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಸ್ಕೂಟಿ ಪರಸ್ಪರ ಡಿಕ್ಕಿ ಹೊಡೆದಿದ್ದು, ಸ್ಕೂಟಿ ಸವಾರನಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.
ಸ್ಥಳೀಯರು ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದಿರುವುದಾಗಿ ತಿಳಿದುಬಂದಿದೆ.