ರೋಟರಿ ಜಿಲ್ಲೆ 3181. ಇದರ ನಾಲ್ಕು ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಒಳಗೊಂಡಂತೆ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಕ್ಟೋಬರ್ 20ರಂದು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಜರಗಿಸುವುದಾಗಿದೆ. ಈ ಬಗ್ಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ವಿಗಾಗಿ ರೋಟರಿ ಜಿಲ್ಲೆಯ ಅಧಿಕಾರಿಗಳು ಒಳಗೊಂಡಂತೆ ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಪೂರ್ವ ಅಧ್ಯಕ್ಷರುಗಳ ,ಸದಸ್ಯರುಗಳ ವಿಶೇಷ ಸಭೆಯನ್ನು ಗುರುವಾರ ಏರ್ಪಡಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷ ಚಂದ್ರಶೇಖರ ನಾಯರ್ ವಹಿಸಿದ್ದರು. ರೋಟರಿ ಜಿಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳ ಕಾರ್ಯದರ್ಶಿ ಆಸ್ಕರ್ ಆನಂದ್, ಸಾಂಸ್ಕೃತಿಕ ಕಾರ್ಯಕ್ರಮಗಳ ಚೇರ್ಮನ್ ಸತೀಶ್, ವೈಸ್ ಚೇರ್ಮನ್ ಗೋಪಾಲ ಎಣ್ಣೆ ಮಜಲ್,ಇವೆಂಟ್ ಚೇರ್ಮನ್ ಬಾಲಕೃಷ್ಣ ಪೈ, ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ನಿಕಟ ಪೂರ್ವ ಅಧ್ಯಕ್ಷ ಪ್ರಶಾಂತ ಕೋಡಿಬೈಲ್, ಉಪ ಕಾರ್ಯದರ್ಶಿ ಭವಾನಿ ಶಂಕರ ಪೈಲಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾಂಸ್ಕೃತಿಕ ಚೇರ್ಮನ್ ಸತೀಶ್ ಹಾಗೂ ಜಿಲ್ಲಾ ಕಾರ್ಯದರ್ಶಿ ಆಸ್ಕರ್ ಆನಂದ ಕಾರ್ಯಕ್ರಮಗಳ ರೂಪರೇಷೆ, ಆಯೋಜಿಸುವ ಬಗ್ಗೆ ,ವ್ಯವಸ್ಥೆ, ಇತ್ಯಾದಿಗಳ ಬಗ್ಗೆ ವಿವರವಾದ ಮಾಹಿತಿಗಳನ್ನು ನೀಡಿದರು. ಸಭೆಯಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ ಪೂರ್ವ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಜರಿದ್ದರು.