ಕಾರಣಿಕ ಕ್ಷೇತ್ರ ಪುತ್ತುರು ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ.3ರಿಂದ ಪ್ರಾರಂಭಗೊಂಡು 9 ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜ್ರಂಭಿಸಿದ ನವರಾತ್ರಿ ಉತ್ಸವವು ಅ.12ರಂದು ತುಲಾಭಾರ ಸೇವೆ, ಆಯುಧ ಪೂಜೆಯೊಂದಿಗೆ ತೆರೆ ಕಂಡಿತು.
ಉತ್ಸವದಲ್ಲಿ ಅ.12ರಂದು ಬೆಳಿಗ್ಗೆ ತುಲಾಭಾರ ಸೇವೆ, ವಜ್ರಮಾತಾ ಮಹಿಳಾ ಭಜನಾ ಮಂಡಳಿಯವರಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಆಯುಧ ಪೂಜೆ, ಲಕ್ಷ್ಮೀದೇವಿ ಭಕ್ತವೃಂದದವರಿಂದ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ ನೆರವೇರಿತು.
ಧರ್ಮದರ್ಶಿ ಐತ್ತಪ್ಪ ಸಪಲ್ಯ ಉಪಸ್ಥಿತರಿದ್ದರು. ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿ ನವರಾತ್ರಿ ಉತ್ಸವದ ವೈಭವವನ್ನು ಕಣ್ತುಂಬಿಕೊಂಡು ಪುನೀತರಾದರು.