ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024

0

ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದಲ್ಲಿ ಜರುಗುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ – ಸುಳ್ಯ ದಸರಾ 2024 ಶೋಭಾಯಾತ್ರೆಯು ಇಂದು ಸುಳ್ಯ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದ್ದು, ಶ್ರೀದೇವಿಯ ಅದ್ಧೂರಿ ಶೋಭಾಯಾತ್ರೆ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಗೌರವಾಧ್ಯಕ್ಷ ಹಾಗೂ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ದಸರಾ ಉತ್ಸವ ಸಮಿತಿ ಅಧ್ಯಕ್ಷೆ ಹಾಗೂ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು.
ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ ಶ್ರೀ ಶಾರದಾ ದೇವಿಗೆ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಉತ್ಸವ ಸಮಿತಿ ಗೌರವಾಧ್ಯಕ್ಷ ಕೃಷ್ಣಕಾಮತ್ , ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್, ಅಧ್ಯಕ್ಷ ನಾರಾಯಣ ಕೇಕಡ್ಕ, ಉತ್ಸವ ಸಮಿತಿ ಅಧ್ಯಕ್ಷ ಡಾ. ಲೀಲಾಧರ್ ಡಿ. ವಿ., ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ನವೀನ್ ಚಂದ್ರ ಕೆ.ಎಸ್., ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ವಕುತ್ತಮೊಟ್ಟೆ, ಸೇವಾ ಸಮಿತಿ ಕಾರ್ಯದರ್ಶಿ ರಾಜು ಪಂಡಿತ್, ಶ್ರೀ ಶಾರದಾಂಬ ದಸರಾ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ ಸೇರಿದಂತೆ ಶ್ರೀ ಶಾರದಾಂಬ ದಸರಾ ಉತ್ಸವದ ಸಮೂಹ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.