ನ.23 ರಂದು ಗ್ರಾಮ ಪಂಚಾಯತ್ ಉಪಚುನಾವಣೆ

0

ಮಂಡೆಕೋಲು, ನೆ.ಕೆಮ್ರಾಜೆ, ಕೊಲ್ಲಮೊಗ್ರ, ಸುಬ್ರಹ್ಮಣ್ಯದಲ್ಲಿ ತೆರವಾದ ಸ್ಥಾನಗಳಿಗೆ ಚುನಾವಣೆ

ಗ್ರಾಮ ಪಂಚಾಯತ್‌ಗಳಲ್ಲಿ ತೆರವಾದ ಖಾಲಿ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು ನ.೨೩ರಂದು ಚುನಾವಣೆ ನಡೆಯಲಿದೆ.
ಸುಳ್ಯ ತಾಲೂಕಿನಲ್ಲಿ ಮಂಡೆಕೋಲು, ಕೊಲ್ಲಮೊಗ್ರ, ನೆಲ್ಲೂರು ಕೆಮ್ರಾಜೆ ಹಾಗೂ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ಗಳಲ್ಲಿ ಒಂದೊಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


ನ.೬ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ನ.೧೨ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನ.೧೩ರಂದು ನಾಮಪತ್ರ ಪರಿಶೀಲನೆ. ನ.೧೫ರಂದು ನಾಮಪತ್ರ ಹಿಂಪಡೆಯಲು ಅವಕಾಶವಿದೆ. ನ.೨೩ರಂದು ಚುನಾವಣೆ ನಡೆಯಲಿದ್ದು, ನ.೨೬ರಂದು ಮತ ಎಣಿಕೆ ನಡೆಯಲಿದೆ.