ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

0

ಸುಳ್ಯ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ಸುಮಾರು 200ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸಜ್ಜನ ಪ್ರತಿಷ್ಠಾನದ ಸಹಕಾರದೊಂದಿಗೆ ಒಂದು ದಿನದ ಅದ್ಯಯನ ತರಬೇತಿ ಕಾರ್ಯಾಗಾರ ಅ.19 ರಂದು ಎನ್ ಎಂ ಸಿ ಸಭಾಂಗಣದಲ್ಲಿ ನಡೆಯಿತು.

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಸುಳ್ಯ, ಪುತ್ತೂರು, ಮಂಗಳೂರಿನ ವಿವಿಧ ಕಾಲೇಜುಗಳಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ನಡೆಯುತ್ತಿದೆ.

“ಗುಡ್ ಟು ಗ್ರೇಟ್‌ ಸ್ಟೂಡೆಂಟ್ “*
ಎಂಬ ಶೀರ್ಷಿಕೆಯಡಿಯಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು
ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಫಾರ್ಮೆಡ್ ಲಿಮಿಟೆಡ್ ನ ಮಾನವ ಸಂಪನ್ಮೂಲ ತರಬೇತಿ ಮತ್ತು ಆಡಳಿತ ಅಭಿವೃದ್ಧಿ ವಿಭಾಗದ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರು ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಅಧ್ಯಕ್ಷರಾದ ಡಾ. ಉಮ್ಮರ್ ಬೀಜದಕಟ್ಟೆ ಮತ್ತು ಫಾರ್ಮೆಡ್ ಲಿಮಿಟೆಡ್ ನ ತರಬೇತಿ ವಿಭಾಗದ ಸಹಾಯಕ ಉಪಾಧ್ಯಕ್ಷರು ಅಂತರರಾಷ್ಟ್ರೀಯ ತರಬೇತುದಾರ ವಿಕ್ರಂ ಸಾಗರ್ ಸಕ್ಸೇನಾ ರವರು ನಡೆಸಿಕೊಟ್ಟರು.
ಕಾರ್ಯಕ್ರಮವನ್ನು ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಉಪಾಧ್ಯಕ್ಷೆ ಶೋಭಾ ಚಿದಾನಂದ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಎನ್ ಎಂ ಸಿ ಆಡಳಿತಾಧಿಕಾರಿ ಚಂದ್ರಶೇಖರ ಪೆರಾಲು, ಪ್ರಾಂಶುಪಾಲರಾದ ಡಾ.ರುದ್ರಕುಮಾರ್,ಉಪನ್ಯಾಸಕಿ ಡಾ.ಮಮತಾ,ರತ್ನಾವತಿ,ಕಾರ್ಯಕ್ರಮ ಸಂಯೋಜಕಿ ಉಪನ್ಯಾಸಕಿ ಭವ್ಯ ಪಿ ಎಂ,ಸಜ್ಜನ ಪ್ರತಿಷ್ಠಾನ ನಿರ್ದೇಶಕ ಪತ್ರಕರ್ತ ಶರೀಫ್ ಜಟ್ಟಿಪಳ್ಳ ,ಮಂಜುನಾಥ್ ಹಿರಿಯೂರು ಉಪಸ್ಥಿತರಿದ್ದರು.
ಉಪನ್ಯಾಸಕಿ ಭವ್ಯ ಸ್ವಾಗತಿಸಿ, ಉಪನ್ಯಾಸಕಿ ರಂಜಿತಾ ವಂದಿಸಿ,ಕು.ಅನ್ವಯ ಕಾರ್ಯಕ್ರಮ ನಿರೂಪಿಸಿದರು
ಇದೇ ಸಂದರ್ಭದಲ್ಲಿ ಸಜ್ಜನ ಪ್ರತಿಷ್ಠಾನ ಅಧ್ಯಕ್ಷ ಡಾ.ಉಮ್ಮರ್ ಬೀಜದಕಟ್ಟೆ ಹಾಗೂ ಅಂತರಾಷ್ಟ್ರೀಯ ತರಬೇತುದಾರ ವಿಕ್ರಮ್ ಸಾಗರ್ ಸೇಕ್ಸೆನಾ ರವರನ್ನು ಎನ್ ಎಂ ಸಿ ಆಡಳಿತ ವತಿಯಿಂದ ಸನ್ಮಾನಿಸಿ ಗೌರವಿಸಿದರು.