ಪಾಲಡ್ಕದಲ್ಲಿ ಬೈಕಿಗೆ ಹಿಂಬದಿಯಿಂದ ಕಾರು ಢಿಕ್ಕಿ

0

ಬೈಕ್ ಸವಾರನಿಗೆ ಗಾಯ – ಆಸ್ಪತ್ರೆಗೆ ದಾಖಲು

ಅಪಘಾತದ ದೃಶ್ಯ ಸಿ.ಸಿ. ಕ್ಯಾಮರಾದಲ್ಲಿ ಸೆರೆ

ಕಾರೊಂದು ಹಿಂದಿನಿಂದ ಬಂದು ಬೈಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಅರಂಬೂರಿನ ಪಾಲಡ್ಕದಲ್ಲಿ ಅ.20ರಂದು ಅಪರಾಹ್ನ ಸಂಭವಿಸಿದೆ.

ಮೆಸ್ಕಾಂ ಉದ್ಯೋಗಿಯಾಗಿರುವ ಜಯಪ್ರಕಾಶ್ ಕಜ್ಜೋಡಿ ಅವರು ತಮ್ಮ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕ್ರೆಟಾ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ಜಯಪ್ರಕಾಶ್ ಅವರ ಕೈ ಮತ್ತು ಕಾಲುಗಳಿಗೆ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಅವರನ್ನು ಸ್ಥಳೀಯರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ದೃಶ್ಯ ಸಿ.ಸಿ. ಕ್ಯಾಮಾರಾದಲ್ಲಿ ಸೆರೆಯಾಗಿದೆ.