ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

0

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇದರ ಸಹಯೋಗದೊಂದಿಗೆ ಅ. 29ರಂದು ನಡೆಯಲಿರುವ 9ನೇ ವರ್ಷದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ಆಯುರ್ವೇದ ಸಪ್ತಾಹ ಕಾರ್ಯಕ್ರಮವನ್ನು ದಿನಾಂಕ 21-10-24 ರಿಂದ 29.10.2024 ರ ತನಕ ಹಮ್ಮಿಕೊಂಡಿದ್ದು ಮೊದಲನೆಯ ದಿನವಾದ ಅ. 21ರಂದು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ – “12 ರಿಂದ 21 ವಯಸ್ಸಿನ ಹದಿಹರೆಯದ ಹೆಣ್ಣು ಮಕ್ಕಳ ಯೋಗ ಕ್ಷೇಮದಲ್ಲಿ ಆಯುರ್ವೇದ ಪಾತ್ರ” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.


ಮಾಹಿತಿ ಕಾರ್ಯಗಾರವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ತ್ರೀರೋಗ ಮತ್ತು ಪ್ರಸೂತಿ ತಂತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ರಶ್ಮಿ ಕೆ.ಎಸ್., ನಡೆಸಿಕೊಟ್ಟರು. ಶಾಲೆಯ 79 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ರಾಧಾಕೃಷ್ಣ ಬೊಳ್ಳೂರು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಲ, ಚೊಕ್ಕಾಡಿ ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರತಿಭಾ ಎಸ್ ಆಳ್ವ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪಂಚಕರ್ಮ ವಿಭಾಗದ ಮುಖ್ಯಸ್ಥರಾದ ಡಾ. ಸನತ್ ಕುಮಾರ್ ಡಿ.ಜಿ., ಸ್ತ್ರೀ ರೋಗ ಮತ್ತು ಪ್ರಸೂತಿ ತಂತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ರಶ್ಮಿ ಕೆ ಎಸ್, ಚೊಕ್ಕಾಡಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ. ಸಂಕೀರ್ಣ ಚೊಕ್ಕಾಡಿ, ಉಪಸ್ಥಿತರಿದ್ದರು. ಸಂಕೀರ್ಣ ಚೊಕ್ಕಾಡಿ ಸ್ವಾಗತಿಸಿ, ಡಾ. ಸನತ್ ಕುಮಾರ್ ಡಿ.ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕಿ ಶೋಭ ವಂದಿಸಿ ಶಿಕ್ಷಕಿ ಜಯಶ್ರೀ ಎಮ್ ಕಾರ್ಯಕ್ರಮ ನಿರೂಪಿಸಿದರು.
ಕಾಲೇಜಿನ ಡಾ. ಪ್ರತಿಮಾ ಗುಪ್ತ ಡಾ. ಯು ಸಂತೋಷ್ ನಾಯಕ್, ಡಾ. ಲಕ್ಷ್ಮೀಶ ಕೆ.ಎಸ್, ಡಾ. ಪಾವನ ಕೆಬಿ ಡಾ. ಸಂತೋಷ್ ನಾಯರ್, ಡಾ. ಅನಿತಾ ಎಸ್., ಸಹಕರಿಸಿದರು.