ನಾಲ್ಕೂರು : ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಲ್ಲಿ ಹಣ್ಣು ಹಂಪಲು ಗಿಡಗಳ ನಾಟಿ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಶೌರ್ಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ಇದರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ಹಣ್ಣು ಹಂಪಲು ಗಿಡಗಳ ನಾಟಿಯ ಕಾರ್ಯಕ್ರಮ ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಹಾಗೂ ಅರಣ್ಯ ಪ್ರದೇಶದಲ್ಲಿ ಇಂದು ನಡೆಯಿತು.


ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ವಿಜಯ ಕುಮಾರ್ ಚಾರ್ಮತ ಗಿಡ ನಾಟಿ ಮಾಡುವ ಮುಖೇನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಕೃಷಿ ಮೇಲ್ವಿಚಾರಕರಾದ ರಮೇಶ್, ನಾಲ್ಕೂರು ಅರಣ್ಯ ರಕ್ಷಕರಾದ ಬಸಪ್ಪ, ಶಾಲಾ ಮುಖ್ಯ ಶಿಕ್ಷಕರಾದ ಚಂದ್ರಶೇಖರ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವರಾಮ ಉತ್ರಂಬೆ, ನಡುಗಲ್ಲು ಒಕ್ಕೂಟದ ಅಧ್ಯಕ್ಷರಾದ ಕೇಶರಾಜ್, ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ ಕೊಯಿಲಾ, ನಾಲ್ಕೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸತೀಶ್ ಬಂಬುಳಿ, ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಜ್ಞಾನದೀಪ ಶಿಕ್ಷಕಿ ಶ್ರೀಮತಿ ಸವಿತಾ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ನಾಲ್ಕೂರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಮತ್ತು ಒಕ್ಕೂಟದ ಸದಸ್ಯರು ಶಾಲಾ ವಠಾರದಲ್ಲಿ ಮತ್ತು ಅರಣ್ಯ ಪ್ರದೇಶದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿಯನ್ನು ಮಾಡಿದರು. ಈ ಕಾರ್ಯಕ್ರಮದಲ್ಲಿ ನಾಲ್ಕೂರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿಯವರಾದ ಹರಿಶ್ಚಂದ್ರ ಕೆ. ಸ್ವಾಗತಿಸಿ, ಧನ್ಯವಾದವಿತ್ತರು.