ಸುಳ್ಯ ರೋಟರಿ ಕ್ಲಬ್, ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಗರ್ಭ ಕಂಠದ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ಕಾರ್ಯಕ್ರಮ ಅ. 23ರಂದು ಕೊಡಿಯಾಲಬೈಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.
ಕಾಲೇಜು ವಿದ್ಯಾರ್ಥಿನಿಯರಿಗಾಗಿ ಗರ್ಭಕಂಠದ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ಬಗ್ಗೆ ಮುನ್ನೆಚ್ಚರಿಕೆ ಮತ್ತು ಮಾಹಿತಿಯನ್ನು ಹಾಗೂ HPV ವ್ಯಾಕ್ಸಿನ್ ಬಗ್ಗೆ ಸುಳ್ಯದ ಸ್ತ್ರೀ ರೋಗತಜ್ಞೆ ಡಾ. ವೀಣಾ ಪಾಲಚಂದ್ರ ಮಾಹಿತಿ ನೀಡಿದರು. ರೋಟರಿ ಕ್ಲಬ್ ಅಧ್ಯಕ್ಷೆ ಯೋಗಿತ ಗೋಪಿನಾಥ್ ಅಧ್ಯಕ್ಷತೆ ವಹಿಸಿದ್ದರು. ಇನ್ನರ್ ವ್ಹೀಲ್ ಕ್ಲಬ್ ನ ಅಧ್ಯಕ್ಷೆ ರೊ. ಚಿಂತನ ಸುಬ್ರಹ್ಮಣ್ಯ, ಇನ್ನರ್ ವೀಲ್ ಕ್ಲಬ್ ನ ISO ಶ್ರೀಮತಿ ಸೌಮ್ಯ ರವಿಪ್ರಸಾದ್, ಪ್ರೋಗ್ರಾಂ ಅಸಿಸ್ಟೆಂಟ್ ಆಫೀಸರ್ ಶ್ರೀಮತಿ ಸುರೇಖಾ ಹೆಚ್ ಹಾಗೂ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಲತಾ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.