ಸುಳ್ಯ ಹಳೆಗೇಟು ಹೊಸಗದ್ದೆ ಬಳಿಯ ಶ್ರೀಮತಿ ಭವಾನಿಯವರ ಪುತ್ರ ರೋಷನ್ ರವರು ಜಾಂಡಿಸ್ ನಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಎರಡು ವಾರಗಳ ಹಿಂದೆ ಜಾಂಡಿಸ್ ನಿಂದ ಬಳಲುತ್ತಿದ್ದ ಇವರು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಿನ್ನೆ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 25 ವರ್ಷ ವಯಸ್ಸಾಗಿತ್ತು.
ಮೃತರು ತಾಯಿ ಭವಾನಿ, ಸಹೋದರಿ ವಸಂತಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.