ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಮಾಸಿಕ ಸಭೆ

0

ಸಮುದಾಯ ಭವನ ನಿರ್ಮಾಣದ ಮನವಿ ಪತ್ರ ಬಿಡುಗಡೆ

ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಮಾಸಿಕ ಸಭೆಯು ಸಂಘದ ಅಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ ಯವರ ಅಧ್ಯಕ್ಷತೆಯಲ್ಲಿ ಅ.27 ರಂದು ಸಂಘದ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಘಕ್ಕೆ ಸುಮಾರು ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯಭವನ ನಿರ್ಮಾಣ ಕಾರ್ಯದ ಮನವಿ ಪತ್ರವನ್ನು ಬಿಡುಗಡೆ ಮಾಡಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಉಪಸ್ಥಿತರಿದ್ದರು.

ನ.17 ರಂದು ಮಂಗಳೂರು ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರು ಭಾಗವಹಿಸುವ ಕುರಿತುಚರ್ಚಿಸಲಾಯಿತು. ಸಂಘದ ಸದಸ್ಯರು ಸೇರಿಕೊಂಡು ಸಂಘದ ಕಟ್ಟಡದ ಪರಿಸರದಲ್ಲಿ ಸ್ವಚ್ಚತಾ ಕಾರ್ಯ ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು.

ಸಂಘದ ಲೆಕ್ಕ ಪತ್ರವನ್ನು ಕೋಶಾಧಿಕಾರಿ ದಿನೇಶ್ ಬಾಚೋಡಿ ಮಂಡಿಸಿದರು. ಕಾರ್ಯದರ್ಶಿ ಮಧುಚಂದ್ರ ಪಂಜ ವರದಿ ವಾಚಿಸಿದರು.
ಜತೆ ಕಾರ್ಯದರ್ಶಿ ವಾಸುದೇವ ಜಾಲ್ಸೂರು ಕಾರ್ಯಕ್ರಮ ನಿರೂಪಿಸಿದರು. ಸಂಘದ ಮಾಜಿ ಅಧ್ಯಕ್ಷರುಗಳು ಮತ್ತು ನಿರ್ದೇಶಕರು,ಸದಸ್ಯರು ಉಪಸ್ಥಿತರಿದ್ದರು.