ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ದ.ಕ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಕಿ ಸರಸ್ವತಿ ಅವರಿಗೆ ವಿದಾಯ ಸಮಾರಂಭ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮವು. ಅ. 29ರಂದು ಅರಂತೋಡಿನಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿದರು. ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ ಅವರು ವಹಿಸಿದ್ದರು.
ಈ ಸಂದರ್ಭದಲ್ಲಿ ಶ್ರೀಮತಿ ಸರಸ್ವತಿ ಮತ್ತು ಚಿದಾನಂದ ಮಾಸ್ತರ್ ದಂಪತಿಗಳು ದೀಪವನ್ನು ಕೊಡುಗೆಯಾಗಿ ನೀಡಿದರು.
ನಿವೃತ್ತ ಶಿಕ್ಷಕಿ ಸರಸ್ವತಿ ಹಾಗೂ ಚಿದಾನಂದ ಮಾಸ್ತರ್ ಅಡ್ತಲೆ ದಂಪತಿಗಳನ್ನು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶು ಪಾಲರಾದ ಕೆ.ಆರ್.ಗಂಗಾಧರ ಹಾಗೂ ಸಾಹಿತ್ಯ ಪರಿಷತ್ತು ಸುಳ್ಯ ಇದರ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಅವರು ಸನ್ಮಾನಿಸಿದರು.
ಚಂದ್ರಶೇಖರ ಪೇರಾಲು ಅವರು ಅಭಿನಂದನ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್, ಸುಳ್ಯ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್, ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಪಂಚಾಯತ್ ಸದಸ್ಯರಾದ ಶಿವನಂದ ಕುಕ್ಕುಂಬಳ, ಶ್ರೀಮತಿ ಮಾಲಿನಿ ವಿನೋದ್ ,ಪುಷ್ಪಾಧರ ಕೊಡೆಂಕಿರಿ , ಶ್ವೇತ ಅರಮನೆಗಯ, ಸಿ.ಆರ್.ಪಿ. ಮಮತಾ, ನೌಕರ ಸಂಘದ ಸುಳ್ಯ ತಾಲೂಕು ಅಧ್ಯಕ್ಷೆ ಶ್ರೀಮತಿ ಧನಲಕ್ಷ್ಮಿ, ಎಸ್.ಡಿ.ಎಂ.ಸಿ.ಅಧ್ಯಕ್ಷ ಸುರೇಶ್ ಯು.ಕೆ. ಹಿರಿಯ ವಿದ್ಯಾರ್ಥಿ ಸಂಘ ದ ಅಧ್ಯಕ್ಷ ಸತೀಶ್ ನಾಯ್ಕ್,ನಿವೃತ್ತ ಉಪನ್ಯಾಸಕ ಅಬ್ದುಲ್ ಮಾಸ್ತರ್, ಅಭಿನಂದನ ಸಮಿತಿ ಅಧ್ಯಕ್ಷ ತೀರ್ಥರಾಮ ಅಡ್ಕಬಳೆ,ಅನ್ವರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್ ಅಧ್ಯಕ್ಷ ಮಜೀದ್ ಉಪಸ್ಥಿರಿದ್ದರು.
ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ ಸ್ವಾಗತಿಸಿ ಶಿಕ್ಷಕಿ ಭಾನುಮತಿ ಕಾರ್ಯಕ್ರಮ ನಿರೂಪಿಸಿದರು.