ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ CMERethinking Breast Cancer Care ಕಾರ್ಯಕ್ರಮ

0

ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳು ವಿಚಾರವಾಗಿ CME
Rethinking Breast Cancer Care ಕಾರ್ಯಕ್ರಮ ಅ. 29ರಂದು ನಡೆಯಿತು.

ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳು ಆಚರಣೆ
ಹಿನ್ನೆಲೆಯಲ್ಲಿ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಒಂದು ದಿನದ “CME” ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸುಳ್ಯ ಎ.ಒ.ಎಲ್.ಇ. ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಸಂಪನ್ಮೂಲ ವ್ಯಕ್ತಿಗಳಾದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ಕನ್ಸಲ್ಟೆಂಟ್ ಬ್ರೆಸ್ಟ್ ಸರ್ಜನ್ ಡಾ. ಬಸಿಲಾ ಅಮೀರ್ ಆಲಿ, ಮಂಗಳೂರಿನ ಕನಚ್ಚೂರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನ ಚೀಫ್ ಮೆಡಿಕಲ್ ಅಂಕೋಲಾಜಿಸ್ಟ್ ಡಾ ಗುರುಪ್ರಸಾದ್ ಭಟ್, ಪೆತಾಲಜಿ ವಿಭಾಗ ಮುಖ್ಯಸ್ಥೆ ಡಾ ಸತ್ಯವತಿ ಆರ್ ಆಳ್ವ, ಕಾರ್ಯಕ್ರಮದ ಸಂಯೋಜಕರು ಹಾಗೂ ಜನರಲ್ ಸರ್ಜರಿ ವಿಭಾಗ ಮುಖ್ಯಸ್ಥರಾದ ಡಾ. ಗೋಪಿನಾಥ್ ಪೈ, ಜನರಲ್ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ರಂಜಿತ್ ಕೆ.ಬಿ, ಡಾ ನಿಖಿಲ್ ಎನ್.ಜಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉದ್ಘಾಟನಾ ಸಮಾರಂಭದ ಬಳಿಕ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕಾರ್ಯಗಾರ ನಡೆಯಿತು.

ಡಾ. ಗೋಪಿನಾಥ್ ಪೈ ಜಿಪಿ Introduction to breast cancer ಕುರಿತು, ಡಾ. ಬಸಿಲಾ ಅಮೀರ್ ಆಲಿ Surgical Management in Early Breast cancer ವಿಷಯವಾಗಿ, ಡಾ. ಸತ್ಯವತಿ ಆರ್ ಆಳ್ವ Histopathalogical aspects of breast cancer ಎಂಬ ವಿಚಾರವಾಗಿ, ಡಾ. ಗುರುಪ್ರಸಾದ್ ಭಟ್ Strategies In Management Of Breast Cancer ವಿಚಾರವಾಗಿ ಮಾಡಿದರು.
ವಿದ್ಯಾರ್ಥಿಗಳಾದ ಶಮಾ ಮತ್ತು ನಿಕ್ಷೇಪ್ ಪ್ರಾರ್ಥಿಸಿದರು. ಡಾ ಗೋಪಿನಾಥ್ ಪೈ ಸ್ವಾಗತಿಸಿದರು. ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ವೈದ್ಯಕೀಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.