ಸುಳ್ಯ ಲಯನ್ಸ್ ಕ್ಲಬ್ ವತಿಯಿಂದ ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಲಯನ್ಸ್ ಕ್ಲಬ್ ಸುಳ್ಯ ಹಾಗೂ ವಿವೇಕಾನಂದ ವಿದ್ಯಾಸಂಸ್ಥೆಗಳು, ವಿನೋಬನಗರ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನ. 1 ರಂದು ಆಚರಿಸಲಾಯಿತು.

ಸಭಾ ಕಾರ್ಯಕ್ರಮಗೂ ಮೊದಲು ವಿನೋಬನಗರ ಬಸ್ ನಿಲ್ದಾಣದ ಬಳಿಯಿಂದ ಶಾಲಾ ಆವರಣಕ್ಕೆ ಮೆರವಣಿಗೆ ನಡೆಯಿತು. ಕನ್ನಡದ ಶಾಲು ಧರಿಸಿ ಅತಿಥಿಗಳು, ಲಯನ್ಸ್ ಪದಾಧಿಕಾರಿಗಳು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಬಳಿಕ ಶಾಲಾ ವೇದಿಕೆಯಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ
ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಕೃಷ್ಣ ರೈ ಅಧ್ಯಕ್ಷತೆ ವಹಿಸಿದ್ದರು.

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆ ಲೀಲಾ ದಾಮೋದರ ಮುಖ್ಯ ಅಭ್ಯಾಗತರಾಗಿ ಆಗಮಿಸಿ ಮಾತನಾಡಿದರು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ನ. ಸೀತಾರಾಮ, ಶಾಲಾ ಸಂಚಾಲಕ ಗೋಪಾಲಕೃಷ್ಣ ಭಟ್ ಕಾಟೂರು, ಸುಳ್ಯ ಲಯನ್ಸ್ ಕ್ಲಬ್ ರಾಮಚಂದ್ರ ಪಲ್ಲತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಲಯನ್ಸ್ ಕ್ಲಬ್ ಸುಳ್ಯ ಇದರ ನಿಕಟ ಪೂರ್ವಾಧ್ಯಕ್ಷ, ಕಾರ್ಯಕ್ರಮದ ಸಂಚಾಲಕ ಆನಂದ ಪೂಜಾರಿ ಪ್ರಾಸ್ತಾವಿಕ ಮಾತನಾಡಿದರು.

ಶಾಲಾ ಮುಖ್ಯ ಶಿಕ್ಷಕ ಜಯಪ್ರಸಾದ್ ಕಾರಿಂಜ ಸ್ವಾಗತಿಸಿ, ಲಯನ್ಸ್ ಕ್ಲಬ್ ಖಜಾಂಜಿ ರಮೇಶ್ ಶೆಟ್ಟಿ ವಂದಿಸಿದರು.

ಶಿಕ್ಷಕರುಗಳಾದ ಉಷಾ, ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.