ಬೆಳ್ಳಾರೆ ಸ್ನೇಹಿತರ ಕಲಾ ಸಂಘ, ಜ್ಞಾನ ದೀಪ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ: ಕನ್ನಡವೇ ನಮ್ಮ ಉಸಿರಾಗಲಿ: ನಮಿತಾ ಎಲ್ ರೈ

0

ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸುವುದರೊಂದಿಗೆ ಕನ್ನಡವೇ ನಮ್ಮ ಉಸಿರಾಗಲಿ ಎಂದು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಕೆ. ಎಲ್ ರೈ ಹೇಳಿದರು.

ಅವರು ನ. 1ರಂದು ಬೆಳ್ಳಾರೆಯ ಸ್ನೇಹಿತರ ಕಲಾ ಸಂಘದ ಆಶ್ರಯದಲ್ಲಿ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಬೆಳ್ಳಾರೆಯ ಅಂಬೇಡ್ಕರ್ ಭವನದ ಮುಂಬಾಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣಗೈದು ಶುಭಹಾರೈಸಿದರು. ಸರ್ಕಾರಿ ಪ್ರೌಢಶಾಲೆ ಎಣ್ಮೂರು, ಸಹ ಶಿಕ್ಷಕ ಲಿಂಗಪ್ಪ ಬೆಳ್ಳಾರೆ ಪ್ರಧಾನ ಉಪನ್ಯಾಸ ನೀಡಿದರು.

ಬೆಳ್ಳಾರೆ ಜ್ಞಾನದೀಪ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಉಮೇಶ್ ಮಣಿಕ್ಕಾರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು.

ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಪದ್ಮನಾಭ ಬೀಡು ಅಧ್ಯಕ್ಷತೆ ವಹಿಸಿದ್ದರು. ಚೇತನ್ ಪಡ್ಪು ಸ್ವಾಗತಿಸಿ, ನಿಕಟಪೂರ್ವಾಧ್ಯಕ್ಷ ವಸಂತ ಉಲ್ಲಾಸ್ ವಂದಿಸಿದರು. ಜ್ಞಾನದೀಪ ಶಿಕ್ಷಕ ತರಬೇತಿ ಸಂಸ್ಥೆ ಮೊಂಟೆಸ್ಸರಿ ವಿದ್ಯಾರ್ಥಿಗಳು, ಶಿಕ್ಷಕಿಯರು ಆಶಯ ಗೀತೆ ಹಾಡಿದರು. ಜ್ಞಾನದೀಪ ಸಂಸ್ಥೆಯ ಉಪನ್ಯಾಸಕ ಯೋಗೀಶ್ ತಳೂರು ಕಾರ್ಯಕ್ರಮ ನಿರ್ವಹಿಸಿದರು.