ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ 14ರ ವಯೋಮಾನದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಖುಷಿ .ಸಿ 8ನೇ ತರಗತಿ ಇವರು ತೃತೀಯ ಬಹುಮಾನವನ್ನು ಪಡೆದುಕೊಂಡಿರುತ್ತಾರೆ.
ಹಳೆಗೇಟಿನ ನಿವಾಸಿಯಾದ ಸುಳ್ಯ ಸಿಎ ಬ್ಯಾಂಕ್ ಉದ್ಯೋಗಿ ಚಿತ್ತರಂಜನ್ ಹಾಗೂ ಸುಳ್ಯ ನೆಹರು ಮೆಮೋರಿಯಲ್ ಕಾಲೇಜ್ ಉಪನ್ಯಾಸಕಿ ದಿವ್ಯಾ ಟಿ ಎಸ್ ದಂಪತಿಗಳ ಪುತ್ರಿ.
ಶಾಲಾ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ’ಸೋಜ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ ಹಾಗೂ ಪುಷ್ಪವೇಣಿ ಹುದೇರಿ ತರಬೇತಿ ನೀಡಿರುತ್ತಾರೆ.