ಉಬರಡ್ಕ ಮಿತ್ತೂರು ಗ್ರಾಮದ ಕಲ್ಲುಪಣೆ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿ ಅ.31 ರಂದು ಸೇವೆಯಿಂದ ನಿವೃತ್ತರಾದ ಶ್ರೀಮತಿ ಶಾರದಾ ಅಡಿಗೈಯವರಿಗೆ ಬೀಳ್ಕೊಡುಗೆ ಸಮಾರಂಭವು ನ.4 ರಂದು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಗೌಡರ ಯುವ ಸೇವಾ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಪಿ.ಎಸ್ ಗಂಗಾಧರ, ಬಾಲವಿಕಾಸ ಸಮಿತಿ ಪದಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ವಿಜಯ ಜೆ.ಡಿ., ಆರೋಗ್ಯ ಇಲಾಖೆಯ ಶ್ರೀಮತಿ ರೇವತಿ, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು, ಊರಿನ ಗಣ್ಯರು, ಹಿರಿಯ ವಿದ್ಯಾರ್ಥಿಗಳು, ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.
ಜಯರಾಮ ನಾರ್ಕೋಡು ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಮಿತ್ರಾ ಸ್ವಾಗತಿಸಿ, ಶ್ರೀಮತಿ ರೇಷ್ಮಾ ಪ್ರಾರ್ಥಿಸಿದರು. ಶ್ರೀಮತಿ ಉಮಾದೇವಿ ವಂದಿಸಿದರು.