ಬಸ್ಸುಗಳ ಕೊರತೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಶಾಸಕರು
ಜನಸಾಮಾನ್ಯರಿಗೆ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದ ರೀತಿಯಲ್ಲಿ ಬಸ್ಸುಗಳನ್ನು ಕಲ್ಪಿಸುವಂತೆ ಸೂಚನೆ
ಸುಳ್ಯದಿಂದ ವಿವಿದ ಕಡೆಗಳಿಗೆ ತೆರಳುವ ಬಸ್ಸುಗಳು ಸರಿಯಾದ ಸಮಯದಲ್ಲಿ ಸಂಚರಿಸದೆ ಇರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ನ 6 ರಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯರವರು ಸುಳ್ಯ ಕೆಎಸ್ಆರ್ಟಿಸಿ ಡಿಪೋ ಹಾಗೂ ಬಸ್ಸು ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಬಸ್ಸುಗಳ ಕೊರತೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು ಸರಿಯಾದ ಸಮಯಕ್ಕೆ ಬಸ್ಸು ಕಲ್ಪಿಸಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬಸ್ಸು ಲಭ್ಯವಾಗುವಂತೆ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ವಿದ್ಯಾರ್ಥಿಗಳಿಗೆ ಬಸ್ಸುಗಳ ಸಮಸ್ಯೆ ಎದುರಾಗುತ್ತಿದ್ದು ಈ ಬಗ್ಗೆ ಅನೇಕ ವಿದ್ಯಾರ್ಥಿಗಳು ಅವರ ಸಮಸ್ಯೆಯನ್ನು ನಮ್ಮೊಂದಿಗೆ ಹೇಳಿಕೊಂಡಿದ್ದಾರೆ.
ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆಗಳು ಕಂಡು ಬಂದಲ್ಲಿ ನಾವುಗಳು ವಿದ್ಯಾರ್ಥಿಗಳಿಗಾಗಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ಬಸ್ಸುಗಳ ಕೊರತೆ ಆಗಿರುವ ಬಗ್ಗೆ ಸುದ್ದಿ ವೆಬ್ಸೈಟ್ ಚಾನಲ್ ನಲ್ಲಿಯೂ ಕೂಡ ವರದಿಯನ್ನು ಮಾಡಲಾಗಿತ್ತು.
ಶಾಸಕರು ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಂದರ್ಭ ಸ್ಥಳದಲ್ಲಿಯೇ ಸುಮಾರು ವಿದ್ಯಾರ್ಥಿಗಳು, ಮಹಿಳೆಯರು, ಶಾಸಕರ ಜೊತೆ ಸಮಸ್ಯೆಯನ್ನು ಹೇಳಿಕೊಂಡರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಎನ್ ಎ, ರಾಮಚಂದ್ರ, ಎಸ್,ಎನ್, ಮನ್ಮಥ,ರಂಜನ್,ಪ್ರಸಾದ್ ಕಾಟೂರು ಮತ್ತು ಕಾರ್ಯಕರ್ತರುಗಳು ಉಪಸ್ಥಿತರಿದ್ದರು.