ಡಾ. ಶಿವರಾಮ ಕಾರಂತರ ಜನ್ಮದಿನಾಚರಣೆಯ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತುಗಳಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ನೀಡುತ್ತಿದ್ದು, ತೆರಿಗೆ ಸಂಗ್ರಹಣೆ ಹಿನ್ನಲೆಯಲ್ಲಿ ಈ ಪ್ರಶಸ್ತಿಗೆ ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಆಯ್ಕೆಯಾಗಿದೆ.
ನ.10ರಂದು ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮ ಪಂಚಾಯತ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೇಘಾಲಯದ ಗೌರವಾನ್ವಿತ ರಾಜ್ಯಪಾಲರಾದ ವಿಜಯ ಶಂಕರ್ ಅವರಿಂದ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರುಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.