ಕನ್ನಡ ಭಾಷೆಗೆ ಅನೇಕ ಸವಾಲುಗಳಿವೆ. ಅದನ್ನು ನಾವೆಲ್ಲರೂ ಎದುರಿಸಿ ಕನ್ನಡ ಭಾಷೆ, ಸಾಹಿತ್ಯ ಪರಂಪರೆಯನ್ನು ಉಳಿಸಿ ಅದನ್ನು ಮುಂದಿನ ಜನಾಂಗಕ್ಕೆ ತಲುಪಿಸುವುದು ನಮ್ಮೆಲರ ಜವಾಬ್ದಾರಿಯಾಗಿದೆ.
ಸಾಹಿತ್ಯ ಪರಿಷತ್ತಿನಂತಹ ಅನೇಕ ಸಂಸ್ಥೆಗಳು ಈ ಜವಾಬ್ದಾರಿಯನ್ನು ಹೊರಬೇಕು ಎಂದು ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಹೇಳಿದರು. ಅವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಕನ್ನಡ ಸಂಘ ಸರಕಾರಿ ಪ್ರೌಢ ಶಾಲೆ ಎಣ್ಮೂರು ಇದರ ಸಹಯೊಗದಲ್ಲಿ ನಡೆದ ಸುವರ್ಣ ಸಂಭ್ರಮ -50 ರ ಪ್ರಯುಕ್ತ ನಡೆದ ಉಪನ್ಯಾಸ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮವವನ್ನು ಶಾಲಾಭಿವೃದ್ಧಿ ಸಮಿತಿ ಅದ್ಯಕ್ಷರಾದ ಮೇದಪ್ಪ ಗೌಡ ಇವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಶಾಲೆಗೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರಗಳನ್ನು ಪಂಜ ಹೋಬಳಿ ಘಟಕ ಅಧ್ಯಕ್ಷ ಬಾಬು ಗೌಡ ಅಚ್ರಪ್ಪಾಡಿ ವಿತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ತಾಲುಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ ಕವಿತಾ ಡಿ ಎಮ್,ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಪ್ರಭಾಕರ ಕಿರಿಭಾಗ ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನಗಳನ್ನು ಅತಿಥಿಗಳು ವಿತರಿಸಿದರು. ಎಣ್ಮೂರು ಪ್ರೌಢ ಶಾಲೆಯ ವಿದ್ಯಾರ್ಥಿಗಳು ಕನ್ನಡ ಗೀತ ಗಾಯನ ನಡೆಸಿ ಸುಶ್ರಾವ್ಯವಾಗಿ ಹಾಡಿದರು.ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಳ್ಳತ್ತಡ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತು ಗಳನ್ನಾಡಿದರು. ಸಹ ಶಿಕ್ಷಕ ಲಿಂಗಪ್ಪ ಬೆಳ್ಳಾರೆ ವಂದಿಸಿದರು. ಕನ್ನಡ ಸಂಘದ ಸಂಚಾಲಕಿ ಶ್ರೀಮತಿ ಉಷಾ ಕೆ ಯೆಸ್ ಕಾರ್ಯಕ್ರಮ ನಿರೂಪಿಸಿದರು.