ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚರಂಡಿಗೆ ಇಳಿದ ಘಟನೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ನ.8ರಂದು ರಾತ್ರಿ ಸಂಭವಿಸಿದೆ.
ಜೋರಾಗಿ ಮಳೆ ಸುರಿಯುತ್ತಿದ್ದ ಕಾರಣ ಲಾರಿ ಆನೆಗುಂಡಿಯ ಪ್ರಯಾಣಿಕರ ಬಸ್ಸು ತಂಗುದಾಣದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬಲಭಾಗಕ್ಕೆ ಸಂಚರಿಸಿ, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬಕ್ಕೆ ಹಾನಿಯಾಗಿರುವುದಾಗಿ ತಿಳಿದುಬಂದಿದೆ.
ಚಾಲಕ ಅಪಾಯದಿಂದ ಪಾರಾಗಿದ್ದು, ಮೆಸ್ಕಾಂ ಸಿಬ್ಬಂದಿಗಳು ಸ್ಥಳದಲ್ಲಿದ್ದು, ವಿದ್ಯುತ್ ದುರಸ್ತಿ ಕಾರ್ಯಾಚರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.