ಎರಡು ದಿನಗಳ ಕಾಲ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಡಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ
ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಯವರ ಕಛೇರಿ ಸುಳ್ಯ, ಜಾಲ್ಸೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೋಬನಗರ ಸಹಭಾಗಿತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2024 – 25 ಜಾಲ್ಸೂರು ಗ್ರಾಮದ ವಿನೋಬನಗರ ವಿದ್ಯಾಸಂಸ್ಥೆಯಲ್ಲಿ ನ.13 ಮತ್ತು 14ರಂದು ನಡೆಯಲಿದೆ.
ನ.13ರಂದು ಬೆಳಿಗ್ಗೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಘನ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಲಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಮಧುಬಂಗಾರಪ್ಪ ಅವರು ಗೌರವ ಉಪಸ್ಥಿತರಿರಲಿದ್ದಾರೆ
ಗಣ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭಾ ಸಂಸದ ಡಾ. ಡಿ. ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಎಸ್.ಎಲ್. ಭೋಜೇಗೌಡ, ಐವನ್ ಡಿಸೋಜ, ಪ್ರತಾಪಸಿಂಹ ನಾಯಕ್, ಮಂಜುನಾಥ ಭಂಡಾರಿ, ಡಾ. ಧನಂಜಯ ಸರ್ಜಿ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡು, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟಾನ್ಲಿ ಅಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮ್ಮರ್ ಯು.ಹೆಚ್., ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಮಮತ ಡಿ.ಎಸ್. ಗಟ್ಟಿ, ಮೀನುಗಾರಿಕಾ ನಿಗಮದ ಅಧ್ಯಕ್ಷೆ ಶ್ರೀಮತಿ ಮಾಲಾ ನಾರಾಯಣ ರಾವ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಉಪಸ್ಥಿತರಿರಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಗ್ರಾ.ಪಂ. ಸದಸ್ಯರುಗಳಾದ ಶ್ರೀಮತಿ ಲೀಲಾವತಿ ವಿನೋಬನಗರ, ಅಬ್ದುಲ್ ಮಜೀದ್ ನಡುವಡ್ಕ, ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಅಧ್ಯಕ್ಷ ನಾರಾಯಣ ಗೌಡ ಬೊಮ್ಮೆಟ್ಟಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು, ತಹಶಿಲ್ದಾರ್ ಶ್ರೀಮತಿ ಮಂಜುಳ ಎಂ., ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಉದ್ಯಮಿ ಕೆ. ಸುಧಾಕರ ಕಾಮತ್ ವಿನೋಬನಗರ ಅವರು ಉಪಸ್ಥಿತರಿರಲಿದ್ದಾರೆ.
ನ.13ರಂದು 1ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಕಂಠಪಾಠ, ಅರೇಬಿಕ್ ಧಾರ್ಮಿಕ ಪಠಣ, ಛದ್ಮವೇಷ, ಚಿತ್ರಕಲೆ, ಕ್ಲೇ ಮಾಡೆಲಿಂಗ್, 5ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಕಂಠಪಾಠ, ಅರೇಬಿಕ್ ಧಾರ್ಮಿಕ ಪಠಣ, ಮಿಮಿಕ್ರಿ , ಪ್ರಬಂಧ ರಚನೆ, ಚಿತ್ರಕಲೆ, ಕ್ಲೇ ಮಾಡೆಲಿಂಗ್, 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಭರತನಾಟ್ಯ ಗಝಲ್, ಭಾವಗೀತೆ, ಜಾನಪದಗೀತೆ, ಆಶುಭಾಷಣ, ಕನ್ನಡ ಭಾಷಣ, ರಸಪ್ರಶ್ನೆ, ಚರ್ಚಾಸ್ಪರ್ಧೆ, ತುಳು ಭಾಷಣ, ಅರೇಬಿಕ್ ಧಾರ್ಮಿಕ ಪಠಣ, ಮಿಮಿಕ್ರಿ, ಪ್ರಬಂಧ ರಚನೆ, ಚಿತ್ರಕಲೆ, ರಂಗೋಲಿ ಸ್ಪರ್ಧೆಗಳು ನಡೆಯಲಿದೆ.
ನ.14ರಂದು 1ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ಅಭಿನಯಗೀತೆ, ಕಥೆ ಹೇಳುವುದು, ಸಂಸ್ಕೃತ ಧಾರ್ಮಿಕ ಪಠಣ, ಇಂಗ್ಲಿಷ್ ಕಂಠಪಾಠ, ಆಶುಭಾಷಣ, ದೇಶಭಕ್ತಿಗೀತೆ, ಭಕ್ತಿಗೀತೆ ಸ್ಪರ್ಧೆಗಳು ಜರುಗಲಿದ್ದು, 5ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಕಥೆ ಹೇಳುವುದು, ಕವನ/ಪದ್ಯ ವಾಚನ, ಆಶುಭಾಷಣ, ಅಭಿನಯಗೀತೆ, ಸಂಸ್ಕೃತ ಧಾರ್ಮಿಕ ಪಠಣ, ಸಂಸ್ಕೃತ ಕಠಪಾಠ, ಇಂಗ್ಲಿಷ್ ಕಂಠಪಾಠ, ಹಿಂದಿ ಕಂಠಪಾಠ, ಭಕ್ತಿಗೀತೆ, ದೇಶಭಕ್ತಿಗೀತೆ ಸ್ಪರ್ಧೆಗಳು ನಡೆಯಲಿದೆ.
8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕವ್ವಾಲಿ, ಜಾನಪದ ನೃತ್ಯ, ಕವನ/ಪದ್ಯ ವಾಚನ, ಸಂಸ್ಕೃತ ಧಾರ್ಮಿಕ ಪಠಣ, ಸಂಸ್ಕೃತ ಭಾಷಣ, ಇಂಗ್ಲಿಷ್ ಭಾಷಣ, ಹಿಂದಿ ಭಾಷಣ ಸ್ಪರ್ಧೆಗಳು ನಡೆಯಲಿದ್ದು,
ಸಮಾರೋಪ ಸಮಾರಂಭವು ಅಪರಾಹ್ನ ನೆರವೇರಲಿದೆ.