ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2024

0

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ನ.9 ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಕ್ರೀಡಾ ಪ್ರೇರಕರಾದ ಶ್ರೀ ಯೋಗೀಶ ಚಿದ್ಗಲ್ ಮುಖ್ಯ ಅತಿಥಿಗಳಾಗಿದ್ದರು. ಮುಖ್ಯ ಅತಿಥಿಗಳ ದಿಶೆಯಲ್ಲಿ ಮಾತನಾಡಿದ ಅವರು ಕ್ರೀಡೆಯ ಮಹತ್ವವನ್ನು ಹೊಗಳಿ, ಶೈಕ್ಷಣಿಕ ಜೀವನದಲ್ಲಿ ಕ್ರೀಡೆಗಳ ಪಾತ್ರವನ್ನು ಪ್ರಸ್ತಾಪಿಸಿದರು. ಕ್ರೀಡೆಯಿಂದ ಲಭಿಸುವ ಮೌಲ್ಯಗಳು ಅಕಾಡೆಮಿಕ್ ಹಾಗೂ ವೃತ್ತಿ ಜೀವನದಲ್ಲಿಯೂ ಯಶಸ್ಸು ಸಾಧಿಸಲು ಸಹಾಯಕವಾಗುತ್ತವೆ.

ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸಲು ಕ್ರೀಡೆಗಳು ಅತ್ಯುತ್ತಮ ಸಾಧನ ಎಂದು ನುಡಿದು ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು. ಡಾ. ಉಜ್ವಲ್ ಯು.ಜೆ., ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು/ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಇವರು ಗೌರವ ಅತಿಥಿಯಾಗಿದ್ದರು. ಇವರು ಮಾತನಾಡಿ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ತಂಡಸಹಕಾರ, ಸಾಮರಸ್ಯ ಮತ್ತು ನಾಯಕತ್ವವನ್ನು ಬೆಳೆಸಲು ಸಹಾಯ ಮಾಡುತ್ತವೆ.

ಕ್ರೀಡೆಯಿಂದ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಹೆಚ್ಚಿಸಬಹುದಲ್ಲದೆ ದೈಹಿಕ ಆರೋಗ್ಯವನ್ನು ಹೆಚ್ಚಿಸಬಹುದು ಎಂದು ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳಿ ಎಂದು ಹುರಿದುಂಬಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಇವರು ಮಾತನಾಡಿ ವಿದ್ಯಾರ್ಥಿಗಳ ಕ್ರೀಡಾ ಕೂಟಕ್ಕೆ ಶುಭ ಹಾರೈಸಿದರು. ಕೆ.ವಿ.ಜಿ. ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನ ದೈಹಿಕ ಶಿಕ್ಷಕರಾದ ಶ್ರೀ ಪ್ರಶಾಂತ್ ಕೆ. ಮತ್ತು ಶ್ರೀಮತಿ ಆಶಾ ತೀರ್ಪುಗಾರರಾಗಿ ಸಹಕರಿಸಿದರು. ಕ್ರೀಡಾ ಕೂಟದಲ್ಲಿ ಎನ್.ಎಸ್.ಎಸ್. ವತಿಯಿಂದ ತಂಪಾದ ಪಾನೀಯ ವಿತರಣೆ ಮತ್ತು ಪ್ರಥಮ ಚಿಕಿತ್ಸೆಯ ಸೌಲಭ್ಯವನ್ನು ಒದಗಿಸಿದರು. ದೈಹಿಕ ಉಪನ್ಯಾಸಕರಾದ ಡಾ. ಎಂ.ಎಸ್. ರಾಜೇಶ್ ಕುಮಾರ್, ಪ್ರೊ. ಅಜಿತ್ ಬಿ.ಟಿ., ಎನ್.ಎಸ್. ಘಟಕಾಧಿಕಾರಿ ಪ್ರೊ. ಸತ್ಯಜಿತ್ ಎಂ. ಮತ್ತು ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಪ್ರೊ. ಲೋಕೇಶ್ ಪಿ.ಸಿ ಕ್ರೀಡಾ ಕೂಟದ ಕಾರ್ಯಕ್ರಮವನ್ನು ಸಂಯೋಜಿಸಿದರು. ಉಪ ಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ, ಆಡಳಿತಾಧಿಕಾರಿ ಶ್ರೀ ನಾಗೇಶ್ ಕೊಚ್ಚಿ ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಬೋದಕ, ಬೋದಕೇತರ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.