18ನೇ ಪಿಆರ್ ಸಿಐ ಜಾಗತಿಕ ಸಂವಹನ ಸಮಾವೇಶದಲ್ಲಿ ಪಿ.ಬಿ.ಹರೀಶ್ ರೈ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪ್ರದಾನ

0

ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ (ಪಿಆರ್ ಸಿಐ) ವತಿಯಿಂದ ಮಂಗಳೂರಿನ ಹೋಟೆಲ್ ಮೋತಿಮಹಲ್ ನಲ್ಲಿ ನಡೆದ 18ನೇ ಪಿಆರ್ ಸಿಐ
ಜಾಗತಿಕ ಸಂವಹನ ಸಮಾವೇಶದ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಜಯವಾಣಿಯ ಮುಖ್ಯ ವರದಿಗಾರ ಪಿ.ಬಿ.ಹರೀಶ್ ರೈ ಅವರನ್ನು ಪತ್ರಿಕೋದ್ಯಮದ ಸಾಧನೆಗಾಗಿ ಕೇಂದ್ರ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಅವರು ಗೌರವಿಸಿದರು.

ಪಿಆರ್ ಸಿಐ ಮುಖ್ಯ ಸಲಹೆಗಾರ ಹಾಗೂ ಚೇರ್ಮನ್ ಎಮಿರೇಟ್ಸ್ ಎಂ.ಬಿ.ಜಯರಾಮ್ ಮತ್ತು ಗಣ್ಯರು ಉಪಸ್ಥಿತರಿದ್ದರು. ಪಿ.ಬಿ.ಹರೀಶ್ ರೈ ಕುಕ್ಕೆ ಸುಬ್ರಹ್ಮಣ್ಯ ದವರಾಗಿದ್ದು, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಮಂಡಳಿ ಸದಸ್ಯ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ನ ದ.ಕ.ಜಿಲ್ಲಾಧ್ಯಕ್ಷ ಹಾಗೂ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಆಡಳಿತ ಸಮಿತಿಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಪತ್ರಿಕೋದ್ಯಮದ ಸಾಧನೆಗಾಗಿ
ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ , ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಶೇಷ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.