ರಾಜ್ಯ ಮಟ್ಟದ ರಸ ಪ್ರಶ್ನೆ ಸ್ಪರ್ಧೆಗೆ ಆಯ್ಕೆ

0

ಆರ್ ಬಿ ಐ ಸಂಸ್ಥೆ ಆಯೋಜಿಸಿದ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕಾಲೇಜಿನ ದ್ವಿತೀಯ ಬಿ ಕಾಮ್ ವಿದ್ಯಾರ್ಥಿಗಳಾದ ಯುವರಾಜಾ ಬಿ ಎಸ್ ಹಾಗೂ ತನುಷ ಕೆ ಆಯ್ಕೆಯಾದವರು.

ಈ ಹಿಂದೆ ಆನ್ ಲೈನ್ ಮೂಲಕ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆ ನಡೆದಿತ್ತು. ಇದರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನ.14ರಂದು ಬೆಂಗಳೂರಿನ ಸರ್ ಎಂ ವಿ ಸಭಾಂಗಣದಲ್ಲಿ ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ನಡೆಯಲಿದೆ.