ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಗ್ ವಿಭಾಗದ ವಿದ್ಯಾರ್ಥಿ ಸಂಘ ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರೆಶರ್‍ಸ್‌ಡೇ ಆಚರಣೆ

0

 ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಫ್ರೆಶರ್ಸ್ ಡೇ ಸಂಭ್ರಮ ಕಾರ್ಯಕ್ರಮವು ದಿನಾಂಕ ೧೨-೧೧-೨೦೨೪ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ  ಗಿರಿಶ್ ಪಿ.ಬಿ., ಚೀಫ್ ಇಂಜಿನಿಯರ್, ಅಂಗ್ಲೋ ಈಸ್ಟರ್ನ್ ಶಿಪ್ ಮ್ಯಾನೇಜ್‌ಮೆಂಟ್ ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮೆರೇನ್ ಇಂಜಿನಿಯರಿಂಗ್ ಬಗ್ಗೆ ಹೇಳಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು. 








ಇದೇ ಸಂದರ್ಭದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ.ಯವರು ಮಾತನಾಡಿ ಹೊಸ ತಂತ್ರಜ್ಞಾನ ಮತ್ತು Minor Degree ಯನ್ನು ಅಳವಡಿಸಿಕೊಂಡು ಉನ್ನತ ಮಟ್ಟಕ್ಕೆ ಏರಬೇಕೆಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು. ಇದೇ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಸುರೇಶ ವಿ. ಯವರು ವಹಿಸಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ. ರಾಘವೇಂದ್ರ ಬಿ. ಕಾಮತ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಕ್ಕೆ ಸೇರ್ಪಡೆಗೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.





 ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಿಂಚನ್ ಸಿ.ಎಲ್, ವಿಭಾಗದ ಅಸೋಸಿಯೇಶನ್ (MEA) ಬಗ್ಗೆ ವಿವರಿಸಿದರು. ಅಸೋಸಿಯೇಶನ್ ಸಂಯೋಜಕರಾದ  ಡಾ. ಸುನಿಲ್ ಕುಮಾರ್ ಎಂ., ಪ್ರೊಫೆಸರ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ, ಕಾರ್ಯದರ್ಶಿ ಹರ್ಷ ಕುಮಾರ್ ಬಿ., ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿವೃಂದ ಉಪಸ್ಥಿತರಿದ್ದರು. ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಹರ್ಷ ಕುಮಾರ್ ಬಿ. ಸ್ವಾಗತಿಸಿ, ಧನ್ಯಶ್ರೀ ಎನ್.ಯು., ಜೀವಿತಾ ಎಂ. ಮತ್ತು ನಿಶಾ ಜೆ.ಪಿ. ಪ್ರಾರ್ಥಿಸಿದರು. ಅಖಿಲೇಶ್ ವಂದಿಸಿದರು. ಚರಣ್ ಎಸ್.ಡಿ. ಮತ್ತು ದೀಕ್ಷಿತ್ ಬಿ. ಕಾರ್ಯಕ್ರಮ ನಿರೂಪಿಸಿದರು.