ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಟ್ಯಾಲೆಂಟ್ ಫೆಸ್ಟ್ ಕಾರ್ಯಕ್ರಮ

0

ಗೂನಡ್ಕದ ಮಾರುತಿ ಇಂಟರ್ ನ್ಯಾಶನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಟ್ಯಾಲೆಂಟ್ ಫೆಸ್ಟ್ ಕಾರ್ಯಕ್ರಮವು ಜರುಗಿತು.

ಕಾರ್ಯಕ್ರಮವು ಶಾಲೆಯ ಶಿಕ್ಷಕ ಶಿಕ್ಷಕಿಯರುಗಳಿಂದ ನಡೆದ ನೃತ್ಯ ಕಾರ್ಯಕ್ರಮದ ಮೂಲಕ ಉದ್ಘಾಟನೆಗೊಂಡಿತು. ಕಳೆದ ಏಳು ದಿನಗಳಿಂದ ಪ್ರತಿದಿನವೂ ಒಂದು ಸ್ಪರ್ಧೆಯಂತೆ ಪ್ರತಿ ತರಗತಿಗಳಿಗೂ ವಿವಿಧ ಸ್ಪರ್ಧೆಗಳನ್ನು ನಡೆಸಿ ಪ್ರಥಮ, ದ್ವಿತೀಯ, ತೃತೀಯ ವಿಜೇತರುಗಳನ್ನು ಆಯ್ಕೆ ಮಾಡಲಾಯಿತು.

ಟ್ಯಾಲೆಂಟ್ ಫೆಸ್ಟ್ ಕಾರ್ಯಕ್ರಮದಲ್ಲಿ ಪ್ರತಿ ತಂಡವು 30 ನಿಮಿಷ ತಮ್ಮ ಪ್ರತಿಭೆಗಳನ್ನು ವ್ಯಕ್ತಪಡಿಸಲು ಅವಕಾಶ ನೀಡಲಾಗಿತ್ತು. ಇದರಲ್ಲಿ ಭರತನಾಟ್ಯ, ಯಕ್ಷಗಾನ, ಮೂಕಾಭಿನಯ, ಕರಾಟೆ, ಫ್ಯಾಷನ್ ಶೋ, ಜಾನಪದ ನೃತ್ಯದಲ್ಲಿ ಕೋಲಾಟ, ಕಂಸಾಳೆ, ಪಿಲಿನಲಿಕೆ, ಮೊದಲಾದ ಪ್ರಕಾರಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

ನಿರ್ಣಾಯಕರಾಗಿ ರಾಜ್ ಮುಖೇಶ್ ಅವರು ಆಗಮಿಸಿದ್ದರು.
ಸಂಸ್ಥೆಯ ಅಧ್ಯಕ್ಷರಾದ ರುಕ್ಮಯ್ಯದಾಸ್, ನಿರ್ದೇಶಕರಾದ ಶ್ರೀಮತಿ ಲೀಲಾವತಿ ರುಕ್ಮಯ್ಯದಾಸ್, ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್, ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಕಿಶೋರ್, ಶಿಕ್ಷಕ – ಶಿಕ್ಷಕೇತರವರು ಮತ್ತು ಪೋಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.