ಗ್ರಂಥಾಲಯಗಳು ಮನುಷ್ಯನ ಬೌದ್ಧಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ – ಕೆ.ಪಿ ರಾಮಕೃಷ್ಣ ಭಟ್
ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2024 ಕಾರ್ಯಕ್ರಮ ನ. 15ರಂದು ನೆಟ್ಟಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು.
ನಿವೃತ್ತ ಶಿಕ್ಷಕ ಕೆ.ಪಿ ರಾಮಕೃಷ್ಣ ಭಟ್ ಉದ್ಘಾಟಸಿ ಶುಭ ಹಾರೈಸಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ಎಲ್.ರೈ ಅಧ್ಯಕ್ಷತೆ ವಹಿಸಿದ್ದರು. ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಗೌರಿ ನೆಟ್ಟಾರು, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾದ ಎನ್.ಎಸ್.ಡಿ ವಿಠಲದಾಸ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ವಸಂತ ಗೌಡ ನೆಟ್ಟಾರು, ಶಾಲಾ ಮುಖ್ಯೋಪಾಧ್ಯಾಯಿನಿ ನಳಿನಾಕ್ಷಿ ಎ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಪಿ. ಎನ್ ಭಟ್ ವಿಜ್ಞಾನದೊಂದಿಗೆ ವಿದ್ಯಾರ್ಥಿಗಳು ಎಂಬ ವಿಶೇಷದ ಬಗ್ಗೆ ಕಾರ್ಯಕ್ರಮ ನಡೆಸಿಕೊಟ್ಟರು. ಮಕ್ಕಳ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಿದ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶಶಿಕಲಾ ಸ್ವಾಗತಿಸಿ ಗ್ರಂಥಾಲಯ ಸಲಹಾ ಸಮಿತಿ ಸದಸ್ಯ ಸಂಜಯ್ ನೆಟ್ಟಾರು ವಂದಿಸಿದರು. ಶಾಲಾ ಸಹ ಶಿಕ್ಷಕರು ಸಹಕರಿಸಿದರು.