ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಸುಳ್ಯ, ಹಾಗೂ ಕೊಡಿಯಾಲ ಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇವುಗಳ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವ ಎಂಬ ವಿಷಯದ ಕುರಿತು ಕಾನೂನು ಅರಿವು ಕಾರ್ಯಕ್ರಮ ನ.14 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಸುಳ್ಯ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರು ಸಮಿತಿಯ ಸದಸ್ಯ ಕಾರ್ಯದರ್ಶಿ ಕು.ಅರ್ಪಿತಾರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ ಜೀವನ ಎಂಬುವುದು ಅತ್ಯಂತ ಸುಂದರ ದಿನಗಳಾಗಿದೆ. ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಲು ಶಿಕ್ಷಣ ಮಹತ್ವ ಪಾತ್ರ ವಹಿಸುವುದು. ಆದ್ದರಿಂದ ಯಾವುದೇ ಕಾರಣಕ್ಕೂ ಶಿಕ್ಷಣವನ್ನು ಮೊಟಕು ಗೊಳಿಸಬಾರದು. ಉತ್ತಮ ಶಿಕ್ಷಣ ಉತ್ತಮ ಜೀವನ ರೂಪಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷಸ್ಥಾನ ವಹಿಸಿದ್ದ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ಶ್ರೀಮತಿ ಚಂದ್ರಕಲಾ ಮಾತನಾಡಿ ಶುಭಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮಕ್ಕೆ ಭಾಗವಹಿಸಿದ್ದ ನ್ಯಾಯವಾಧಿ ರಾಮಚಂದ್ರ ಶ್ರೀಪಾದ ಹೆಗಡೆ ಶಿಕ್ಷಣದ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ವೇದಿಕೆಯಲ್ಲಿ ಸುಳ್ಯ ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಸುಕುಮಾರ್ ಕೊಡ್ತುಗುಳಿ,ಸುಳ್ಯ ಲಯನ್ಸ್ ಕ್ಲಬ್ ಕಾರ್ಯದರ್ಶಿ ರಾಮ ಚಂದ್ರ ಪೆಲ್ತಡ್ಕ,ಪ್ಯಾನಲ್ ವಕೀಲ ಪುಷ್ಪ ರಾಜ್ ಗಾಂಭೀರ್, ಶಾಲಾ ಮುಖ್ಯ ಶಿಕ್ಷಕಿ,ಮೊದಲಾದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ತಮ್ಮ ಕೈನಿಂದ ತಯಾರು ಮಾಡಿದ್ದ ಹೂ ಗುಚ್ಛವನ್ನು ಅತಿಥಿಗಳಿಗೆ ನೀಡಿ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರುಗಳು, ವಿದ್ಯಾರ್ಥಿಗಳ ಪೋಷಕರು, ಶಾಲಾ ಶಿಕ್ಷಕರು,ಅಂಗನವಾಡಿ ಕಾರ್ಯಕರ್ತೆ, ಬಿಸಿಯೂಟ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಶಿಕ್ಷಕರುಗಳಾದ ಶ್ರೀಮತಿ ಸವಿತಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ರೇಷ್ಮಾ ವಂದಿಸಿದರು. ವಿದ್ಯಾರ್ಥಿಗಳಾದ ಕುಮಾರಿ ಮನ್ವಿತಾ,ಪ್ರಜೀತ ಪ್ರಾಥನೆ ಮಾಡಿದರು.