ಇತಿಹಾಸ ಪ್ರಸಿದ್ದ ಕುಲ್ಕುಂದ ಜಾನುವಾರು ಜಾತ್ರೆ ಪ್ರಯುಕ್ತ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರದಿಂದ ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ ನ.16 ರಂದು ನಡೆಯಿತು.ಈ ಮೂಲಕ ಐತಿಹಾಸಿಕ ಜಾನುವಾರು ಜಾತ್ರೆಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ಕಾರ್ತಿಕ ಹುಣ್ಣಿಮೆಯ ದಿನದಂದು ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಕುಕ್ಕೆ ದೇವಳದಿಂದ ಪುಷ್ಪಾಂಲಂಕಾರ ಮಾಡಿ ಗೋವುಗಳನ್ನು ಕರೆತರಲಾಯಿತು. ಬಸವೇಶ್ವರ ದೇವಳದ ಪ್ರಧಾನ ಅರ್ಚಕ ಗಣೇಶ್ ದೀಕ್ಷಿತ್ ವಿವಿಧ ವೈದಿಕ ವಿದಿ ವಿಧಾನಗಳ ಮೂಲಕ ಗೋವುಗಳಿಗೆ ಗೋಪೂಜೆ ನೆರವೇರಿಸಿ, ಗೋಗ್ರಾಸ ನೀಡಿದರು.
ಗೋಪೂಜೆ ಮೂಲಕ ಸಾಂಕೇತಿಕವಾಗಿ ಇತಿಹಾಸ ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆಯನ್ನು ಆಚರಿಸಲಾಯಿತು. ಈ ಸಂದರ್ಭ ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಉಪಾಧ್ಯಕ್ಷ ರವೀಂದ್ರ ಕುಮಾರ್ ರುದ್ರಪಾದ, ಬಸವೇಶ್ವರ ದೇವಳದ ಆಡಳಿತ ಮಂಡಳಿ ಕಾರ್ಯದರ್ಶಿ ಚಂದ್ರಶೇಖರ ಬಸವನಮೂಲೆ, ಪ್ರಮುಖರಾದ ರಾಜೇಶ್ ಕುಲ್ಕುಂದ, ಶಿವರಾಮ ಪಳ್ಳಿಗದ್ದೆ, ವಿಕಾಸ್ ಕುಲ್ಕುಂದ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.