ಬೆಳ್ಳಾರೆ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2024 ಅಂಗವಾಗಿ ಮಾಹಿತಿ ಕಾರ್ಯಕ್ರಮ

0

ಗ್ರಂಥಾಲಯಗಳು ಉನ್ನತ ವ್ಯಾಸಂಗದ ಹೆಬ್ಬಾಗಿಲು : ಕಾಂತಾರಾಜು


ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ವಿಭಾಗ ಇವರ ಸಹಕಾರದೊಂದಿಗೆ ಜರುಗಿದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2024 ಕಾರ್ಯಕ್ರಮದ ಅಂಗವಾಗಿ ನ. 16ರಂದು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ಬಳಿಕ ಮುಂದೇನು ಮತ್ತು ಉನ್ನತ ವ್ಯಾಸಂಗಕ್ಕೆ ಗ್ರಂಥಾಲಯದ ಕೊಡುಗೆ ಎಂಬ ವಿಷಯದ ಬಗ್ಗೆ ಬೆಳ್ಳಾರೆಯ ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಧ್ಯಾಪಕರಾದ ಕಾಂತಾರಾಜು ಸಿ ಕಾರ್ಯಾಗಾರ ನಡೆಸಿಕೊಟ್ಟರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಂಶುಪಾಲರಾದ ಜನಾರ್ಧನ ಕೆ.ಎನ್ ಅಧ್ಯಕ್ಷತೆ ವಹಿಸಿದ್ದರು ನಿವೃತ್ತ ಶಿಕ್ಷಕಿ ಸುಭದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲೆ ಉಮಾಕುಮಾರಿ ಸ್ವಾಗತಿಸಿ, ಸಹ ಶಿಕ್ಷಕಿ ಮಿಯ್ಯಾಗೆ ಬಿ ವಂದಿಸಿದರು, ಧೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು. ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶಶಿಕಲಾ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಸಹ ಶಿಕ್ಷಕರು ಸಹಕರಿಸಿದರು.