71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಘಗಳ ಪಾತ್ರ ಎಂಬ ವಿಷಯದ ಮೇಲೆ ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯು ನ.18ರಂದು ಪೆರಾಜೆ ಸಹಕಾರಿ ಸಂಘದ ಆವರಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷ ಅಶೋಕ ಪೆರುಮುಂಡ, ನಿರ್ದೇಶಕರುಗಳಾದ ಪ್ರಮೀಳಾ ಬಂಗಾರಕೋಡಿ, ಪುಷ್ಪಾವತಿ ಯಾಪಾರೆ, ಶೇಷಪ್ಪ ಎನ್ ವಿ, ಜಯರಾಮ ಪಿ ಟಿ, ಗ್ರಾಮ ಪಂಚಾಯತ್ ಸದಸ್ಯ ಉದಯಚಂದ್ರ ಕುಂಬಳಚೇರಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ, ಸಿಬ್ಬಂದಿ ವರ್ಗದವರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ಜ್ಯೋತಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ್, ಕಂಪ್ಯೂಟರ್ ಶಿಕ್ಷಕಿ ಚಂದ್ರಮತಿ ಕುಂಬಳಚೇರಿ , ಸಂಸ್ಥೆಯ ಆಂತರಿಕ ಲೆಕ್ಕಪರಿಶೋಧಕ ರತ್ನಾಕರ ಗೌಡ ಬಳ್ಳಡ್ಕ ಸಹಕರಿಸಿದರು.
ವಿದ್ಯಾರ್ಥಿಗಳು ಉತ್ತಮವಾಗಿ ವಿಷಯ ಮಂಡನೆ ಮಾಡಿದ್ದು, ಸ್ಪರ್ಧಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ಹಾಗೂ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಯಿತು.