ನ.25ರಂದು ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ನಿಂತಿಕಲ್ಲು ಸಹಯೋಗದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

0

ಮಾಸ್ ಲಿಮಿಟೆಡ್ ಅಧ್ಯಕ್ಷ ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ

ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ ಮಾಸ್ ಲಿಮಿಟೆಡ್ ವತಿಯಿಂದ ಮುರುಳ್ಯ ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ನಿಂತಿಕಲ್ಲು ಸಹಯೋಗದಲ್ಲಿ ಸಹಕಾರರತ್ನ ಎಂ.ಎನ್. ರಾಜೇಂದ್ರಕುಮಾರ್ ಸಹಕಾರದೊಂದಿಗೆ ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭವು ನ.25ರಂದು ನಿಂತಿಕಲ್ಲಿನ ಸಾಧನಾ ಸಹಕಾರಿ ಸೌಧದಲ್ಲಿ ನಡೆಯಲಿದೆ ಎಂದು ಮಂಗಳೂರು ಮಾಸ್ ಲಿಮಿಟೆಡ್ ಅಧ್ಯಕ್ಷ ಸಹಕಾರಿ ರತ್ನ ಕೆ. ಸೀತಾರಾಮ ರೈ ಸವಣೂರು ಅವರು ಪತ್ರಿಕಾಗೋಷ್ಠಿಯಲ್ಲಿ ನ.20ರಂದು ಹೇಳಿದರು.

ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಲಿದ್ದು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೂಟ್ಟು ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮುರುಳ್ಯ – ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ ಕುಸುಮಾವತಿ ರೈ ಕೆ.ಜಿ., ಮುರುಳ್ಯ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವನಿತಾ ಸುವರ್ಣ ಬಿ., ಮಂಗಳೂರು ಜನತಾ ಬಜಾರ್ ಮಾಜಿ ಅಧ್ಯಕ್ಷ ಪ್ರಸನ್ನ ಕೆ . ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಡಾ. ಪಿ. ರಾಮಚಂದ್ರ ಭಟ್ ದೇವಸ್ಯ, ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವಸಂತ ನಡುಬೈಲು, ಎಡಮಂಗಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ದಿವ್ಯಾ ಯೋಗಾನಂದ ಅವರು ಉಪಸ್ಥಿತರಿರಲಿದ್ದಾರೆ.

ಅಡಿಕೆ ದರವು 2001ರಲ್ಲಿ ಕಿಲೋ ಒಂದರ ಬೆಲೆ ರೂ. 30 -35ರವರೆಗೆ ಕುಸಿದಾಗ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿಗಳ ಮತ್ತು ಬೆಳೆಗಾರರ ಚಿಂತನೆ ಮೂಲಕ ಮಾಸ್ ಲಿಮಿಟೆಡ್ ಸಂಸ್ಥೆಯು ಪ್ರಾರಂಭಗೊಂಡಿದ್ದು, ಸಹಕಾರಿ ರತ್ನ ವಾರಣಾಸಿ ಸುಬ್ರಾಯ ಭಟ್ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದೊಂದಿಗೆ ಜಿಲ್ಲೆಯ ಸಹಕಾರಿಗಳು ಮತ್ತು ಅಡಿಕೆ ಬೆಳೆಗಾರರು ಸೇರಿ ಮಾಸ್ ಲಿಮಿಟೆಡ್ ಸಂಸ್ಥೆಯನ್ನು ಹುಟ್ಟು ಹಾಕಿದ್ದಾರೆ. ಪ್ರಕೃತ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಂಸ್ಥೆಯು ಹತ್ತು ಖದೀದಿ ಕೇಂದ್ರಗಳನ್ನು ಹೊಂದಿದ್ದು, ಪ್ರತಿದಿನವೂ ಸದಸ್ಯ ಕೃಷಿಕರ ಅಡಿಕೆಯನ್ನು ಖರೀದಿಸುತ್ತಿದೆ ಎಂದು ಸೀತಾರಾಮ ರೈ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಸ್ ಲಿಮಿಟೆಡ್ ನಿರ್ದೇಶಕರುಗಳಾದ ಸಹಕಾರಿರತ್ನ ನಿತ್ಯಾನಂದ ಮುಂಡೋಡಿ, ಶ್ರೀಮತಿ ರಾಜೀವಿ ರೈ ಬೆಳ್ಳಾರೆ, ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಭಟ್, ಮಾರ್ಕೆಟಿಂಗ್ ಅಧಿಕಾರಿ ಲೋಕೇಶ್, ಕೃಷಿಕ ಬಾಪುಸಾಹೇಬ್ ಸುಳ್ಯ ಉಪಸ್ಥಿತರಿದ್ದರು.