ಗ್ರಂಥಾಲಯ ಅಭಿಯಾನ ಅಂಗವಾಗಿ ಶಾಲಾ ಗ್ರಂಥಾಲಯ ಸದ್ಭಳಕೆ, ವಿವಿಧ ಓದುವ ಸ್ಪರ್ಧೆ, ಆಸಕ್ತಿಯಿಂದ ಭಾಗವಹಿಸಿದ ವಿದ್ಯಾರ್ಥಿಗಳು
ಕರ್ನಾಟಕ ಸರ್ಕಾರ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ. ಕ. ಜಿಲ್ಲಾ ಪಂಚಾಯತ್ ಮಂಗಳೂರು , ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು ಇವರ ಸಹಕಾರದೊಂದಿಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2024ರ ಅಂಗವಾಗಿ ಶಾಲಾ ಗ್ರಂಥಾಲಯ ಸದ್ಭಳಕೆ ಮತ್ತು ವಿದ್ಯಾರ್ಥಿಗಳೇ ಓದುವ ಬನ್ನಿ ಕಾರ್ಯಕ್ರಮ ನ. 20ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತುವಿನಲ್ಲಿ ನಡೆಯಿತು.
ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಶಿಕ್ಷಕಿಯರುಗಳಾದ ಅಕ್ಷತಾ ಮತ್ತು ಸುನೀತಾ ಸಂಪನ್ಮೂಲ ವ್ಯಕ್ತಿ ಗಳಾಗಿ ಭಾಗವಹಿಸಿ ವಿವಿಧ ಸಾಹಿತ್ಯಕ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯರಾದ ಭವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು. ಹಿರಿಯ ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಅಬೂಸಾಲಿಹ್ ಅಧ್ಯಕ್ಷತೆ ವಹಿಸಿದ್ದರು. ಗ್ರಂಥಪಾಲಕಿ ಶಶಿಕಲಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಉಷಾ ಮತ್ತು ಆಶ್ರಿತಾ ಪ್ರಾರ್ಥಿಸಿದರು. ಶಾಲಾ ಸಹ ಶಿಕ್ಷಕಿ ಶ್ವೇತಾ ಎಂ.ಬಿ ಸ್ವಾಗತಿಸಿ, ಶಾಲಾ ಮುಖ್ಯಶಿಕ್ಷಕಿ ಪ್ರೇಮ ವಂದಿಸಿದರು. ಶಾಲಾ ಸಹಶಕ್ಷಕ ಬಾಲಾಜಿ ಟಿ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕರು ಸಹಕರಿಸಿದರು. ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು.