ಅಜ್ಜಾವರ ಗ್ರಾಮದ ಉದ್ದಂತಡ್ಕ ಅಂಗನವಾಡಿ ಕೇಂದ್ರದಲ್ಲಿ ನ.20 ರಂದು ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಜ್ಯೋತಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪುಟಾಣಿಮಕ್ಕಳು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮಕ್ಕಳಿಗೆ ಹಾಗೂ ಪೋಷಕರಿಗೆ ಸ್ತ್ರೀ ಶಕ್ತಿ ಸದಸ್ಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಚಾರ್ವಿಕ್ ತೋಟಂಪಾಡಿ ಮತ್ತು ಚಾರ್ವಿಕ್ ಕುಕ್ಕೆಟ್ಟಿ ಉಪಹಾರದ ವ್ಯವಸ್ಥೆ ಮಾಡಿದರು. ಬಹುಮಾನಗಳ ಪ್ರಾಯೋಜಕರಾಗಿ ಕುಸುಮಾ ಜನಾರ್ದನ ಕೆದ್ಕಾರ್, ಚಂದ್ರಶೇಖರ ಮುಳ್ಯ, ಜಾನಕಿ ಆಲಂಕಲ್ಯ, ಶಿವಣ್ಣ ಗೌಡ ಕೆದ್ಕಾರ್ ಸಹಕರಿಸಿದರು.
ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಧನ್ಯಕುಮಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಮಕ್ಕಳ ಪೋಷಕರು, ಸ್ತ್ರೀ ಶಕ್ತಿ ಸಂಘದ ಹಾಗೂ ಅಂಗನವಾಡಿ ಸಹಾಯಕಿ ಶ್ರೀಮತಿ ದೇವಮ್ಮ ಸಹಕರಿಸಿದರು.