ಬಾರ್ಪಣೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಅಟೋಟ ಸ್ಪರ್ಧೆಗಳು

0

ಆಲೆಟ್ಟಿ ಗ್ರಾಮದ ಬಾರ್ಪಣೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ನ.21 ರಂದು ನಡೆಯಿತು.


ಕಾರ್ಯಕ್ರಮವನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಲೀಕ್ಷಿತಾ ಕೊನ್ನೋಡಿ ದೀಪ ಪ್ರಜ್ವಲಿಸಿದರು. ಈ ಸಂದರ್ಭದಲ್ಲಿ ಬಾರ್ಪಣೆ ಯುವಕ ಮಂಡಲದ ಅಧ್ಯಕ್ಷ ವಿನಯಕುಮಾರ್ ರೈ ಏಣಾವರ, ಅರಂತೋಡು ವಲಯ ಮೇಲ್ವಿಚಾರಕಿ ಶ್ರೀಮತಿ ದೀಪಿಕಾ, ಅಂಗನವಾಡಿ ಶಿಕ್ಷಕಿ ಶ್ರೀಮತಿ ರಾಧಾಲೋಲಜಾಕ್ಷ ಬಾರ್ಪಣೆ, ಬಾಲವಿಕಾಸ ಸಮಿತಿ ಸದಸ್ಯ ಶಿವಪ್ರಸಾದ್ ಕುಂಚಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಬಳಿಕ ಅಂಗನವಾಡಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಪೋಷಕರು ತಮ್ಮ ಮನೆಯಲ್ಲಿ ತಯಾರಿಸಿ ತಂದ ಪೌಷ್ಟಿಕ ಆಹಾರ ಪದಾರ್ಥಗಳ ಪ್ರದರ್ಶನ ಹಾಗೂ ಮಾಹಿತಿ ನೀಡಲಾಯಿತು.
ಅಂಗನವಾಡಿ ಮಕ್ಕಳು ಪ್ರಾರ್ಥಿಸಿದರು. ಯುವಕ ಮಂಡಲದ ಗೌರವಾಧ್ಯಕ್ಷ ಪ್ರವೀಣ್ ಕಲ್ಲೆಂಬಿ ಕಾರ್ಯಕ್ರಮ ನಿರ್ವಹಿಸಿದರು. ಅಂಗನವಾಡಿ ಸಹಾಯಕಿ ಶ್ರೀಮತಿ ಭಾಗ್ಯಶ್ರೀ ಏಣಾವರ, ಯುವಕ ಮಂಡಲದ ಸದಸ್ಯರು ಸಹಕರಿಸಿದರು.
ಈ ಸಂದರ್ಭದಲ್ಲಿ ಪೋಷಕರು ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿದರು.