ಸಂಪಾಜೆ ಗ್ರಾಮ ಪಂಚಾಯತಿ ಸಾಮಾನ್ಯ ಸಭೆ

0

ಗ್ರಾಮದ ಮೂಲಭೂತ ಸೌಕರ್ಯಗಳ ಕುರಿತು ಚರ್ಚೆ

ದ.ಕ. ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಮತಿ ಶಕ್ತಿವೇಲು ಅವರ ಅಧ್ಯಕ್ಷತೆಯಲ್ಲಿ ನ.21 ರಂದು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು

ಸಭೆಯಲ್ಲಿ ವರದಿ ಹಾಗೂ ಲೆಕ್ಕ ಪತ್ರವನ್ನು ಪಂಚಾಯತ್ ಅಬಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ ಮಂಡಿಸಿದರು.
ಸರಕಾರದಿಂದ ಬಂದ ಸುತ್ತೋಲೆಯನ್ನು ಸಭೆಯಲ್ಲಿ ಓದಿ ಹೇಳಲಾಯಿತು. ಸಾರ್ವಜನಿಕರ ಅರ್ಜಿ ಪರಿಶೀಲನೆ , ಹಲವು ಅಬಿವೃದ್ದಿ ಕಾಮಗಾರಿಗಳಾದ ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಆದೇಶ ನೀಡಲು ತೀರ್ಮಾನಿಸಲಾಯಿತು.

ಜೊತೆಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತೆ ಬಗ್ಗೆ ವಿಶೇಷ ಗಮನ ಹರಿಸಲು ಅಬಿವೃದ್ದಿ ಅಧಿಕಾರಿರವರಿಗೆ ಅದಿಕಾರ ನೀಡಲಾಯಿತು. ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಬಿವೃದ್ದಿ ಕಾರ್ಯಕ್ರಮಗಳಿಗೆ ಆಡಳಿತ ಮಂಜೂರಾತಿ ನೀಡಲಾಯಿತು.

ಸಂಪಾಜೆ ಭಾಗದ ಜನರು ದಿನನಿತ್ಯ ಓಡಾಡುವ ಸುಳ್ಯ- ಕೊಯನಾಡು
ಬಸ್ ಸಂಚಾರ ಇಲ್ಲದೆ ಕಳೆದ ಕೆಲ ದಿನಗಳಿಂದ ನಿತ್ಯ ಪ್ರಯಾಣ ಮಾಡುವ ವಿದ್ಯಾರ್ಥಿಗಳು, ಸಾರ್ವಜನಿಕರು, ಕೂಲಿ ಕಾರ್ಮಿಕರು ಬಹಳಷ್ಟು ಕಷ್ಟ ಅನುಭವಿಸುತ್ತಿದ್ದು ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕಸ್ತೂರಿ ರಂಗನ್ ವರದಿ ವರದಿ ಕೈ ಬಿಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನಕ್ಕೆ ಜಿಲ್ಲಾಧಿಕಾರಿಗಳ ಮೂಲಕ ತರಲು ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಎಸ್. ಕೆ. ಹನೀಫ್, ಸದಸ್ಯರುಗಳಾದ ಸೋಮಶೇಖರ್ ಕೊಯಿಂಗಾಜೆ, ಜಿ. ಕೆ. ಹಮೀದ್ ಗೂನಡ್ಕ, ಜಗದೀಶ್ ರೈ ಸಂಪಾಜೆ, ಸುಂದರಿ, ವಿಮಲ, ಅಬೂಸಾಲಿ ಪಿ.ಕೆ., , ರಜನಿ ಶರತ್, ಸವಾದ್,ವಿಜಯ, ಸುಶೀಲ, ಅನುಪಮ ಉಪಸ್ಥಿತರಿದ್ದರು. ಗ್ರಾ.ಪಂ‌. ಸಿಬ್ಬಂದಿಗಳಾದ
ಗೋಪಮ್ಮ ಹಾಗೂ ಮಧುರ ನಡಾವಳಿ ದಾಖಲಿಸಿದರು.