ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಜ್ಜುಗೊಂಡ ಅರಂತೋಡು

0

ನಾಳೆ ಬೆಳಿಗ್ಗೆ ಅರಂತೋಡು – ತೊಡಿಕಾನ ಸಹಕಾರಿ ಸಂಘದಿಂದ ನೆಹರೂ ಸ್ಮಾರಕ ಪ.ಪೂ. ಕಾಲೇಜಿನ ಆವರಣಕ್ಕೆ ಕನ್ನಡ ಭುವನೇಶ್ವರಿಯ ಅದ್ಧೂರಿ ಮೆರವಣಿಗೆ

ಈ ಬಾರಿಯ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಅರಂತೋಡು ಗ್ರಾಮದ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನ.23ರಂದು ನಡೆಯಲಿದ್ದು, ಅರಂತೋಡು ಗ್ರಾಮ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜನೆಗೆ ಸಜ್ಜುಗೊಂಡಿದೆ.

ನಾಳೆ ಬೆಳಿಗ್ಗೆ ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ನಿವೃತ್ತ ಶಿಕ್ಷಕ ಹೊನ್ನಪ್ಪ ಮಾಸ್ತರ್ ಅಡ್ತಲೆ ಅವರು ಕನ್ನಡ ಭುವನೇಶ್ವರಿಯ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿಯಾಗಿ ಸಾಗಿ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜಿಗೆ ಸಾಗಿ ಬರಲಿದೆ.

ಸಾಹಿತ್ಯ ಸಮ್ಮೇಳನ ನಡೆಯಲಿರುವ ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜನ್ನು ಕನ್ನಡ ಧ್ವಜ ಹಾಗೂ ಕೆಂಪು – ಹಳದಿ ಬಣ್ಣದ ತಳಿರು ತೋರಣಗಳಿಂದ ಶೃಂಗರಿಸಲಾಗಿದ್ದು, ಸಾಹಿತ್ಯ ಸಮ್ಮೇಳನಕ್ಕೆ ಅರಂತೋಡು ಸಜ್ಜುಗೊಂಡಿದೆ.